ನಟ ಶಿವರಾಜ್ ಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ: ನಟ ಶಿವರಾಜ್ ಕುಮಾರ್

ತಿಪ್ಪಗೊಂಡನಹಳ್ಳಿ ಜಲಾಯಶದಲ್ಲಿ ಸೋಮವಾರ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ರಾಮನಗರ: ತಿಪ್ಪಗೊಂಡನಹಳ್ಳಿ ಜಲಾಯಶದಲ್ಲಿ ಸೋಮವಾರ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ ಎಂದು ನಟ  ಶಿವರಾಜ್ ಕುಮಾರ್ ಹೇಳಿದ್ದಾರೆ.

ದುರಂತ ನಡೆದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಇಂದು ಭೇಟಿ ನೀಡಿದ್ದ ನಟ ಶಿವರಾಜ್ ಕುಮಾರ್ ಅವರು ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆಯ ಕರೆಘಂಟೆಯಾಗಬೇಕು. ಸಾಹಸ ಮಾಡುವಾಗ ಅನಿರೀಕ್ಷಿತ ದುರಂತ ನಡೆದು ಹೋಗಿದೆ. ಆದರೆ ನಾನು ಹೇಳುವುದೇನು ಎಂದರೆ ನಮಗೆ ಸಾಧ್ಯವಾಗದ ಕೆಲಸವನ್ನು ನಾವು ಎಂದಿಗೂ ಮಾಡಲೇಬಾರದು. ಹೀರೋಗಳಾಗಲಿ ಅಥವಾ ಸಹನಟರಾಗಲಿ ಎಲ್ಲರೂ ಒಂದೇ ಎಂದು ಹೇಳಿದರು.

ನಾನೂ ಕೂಡ ಈ ಹಿಂದೆ ಮೇಲಿನಿಂದ ನೀರಿಗೆ ಜಂಪ್ ಮಾಡಿದ್ದೆ. ಆದರೆ ಆಗ ಸೂಕ್ತ ಮುಂಜಾಗ್ರತೆಗಳನ್ನು ಕೈಗೊಳ್ಳಲಾಗಿತ್ತು. ಇಲ್ಲೂ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಎಲ್ಲೋ ಒಂದು ಲೋಪಸಂಭವಿಸಿ ದುರಂತ ನಡೆದಿದೆ. ಇದಕ್ಕೆ ಯಾರನ್ನೂ ದೂಷಿಸಲು ಸಾಧ್ಯವಿಲ್ಲ ಎಂದು ಶಿವರಾಜ್ ಕುಮಾರ್ ಹೇಳಿದರು.

ಅಂತೆಯೇ ಮೃತ ಉದಯ್ ಮತ್ತು ಅನಿಲ್ ಅವರ ಕುಟುಂಬದ ಕುರಿತು ಮಾತನಾಡಿದ ಶಿವರಾಜ್ ಕುಮಾರ್ ಅವರು, ನಾವೀಗ ಎರಡು ಅಮೂಲ್ಯ ರತ್ನಗಳನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬವನ್ನು ನೆನೆಸಿಕೊಂಡರೆ ಹೊಟ್ಟೆ ಉರಿಯುತ್ತದೆ. ದುಡಿಯುವ ಕೈಗಳನ್ನು ಕಳೆದುಕೊಂಡು ಅನಾಥವಾಗಿದ್ದಾರೆ. ಚಿತ್ರರಂಗದ ಗಣ್ಯರೊಂದಿಗೆ ಮಾತನಾಡಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT