ಸುಂದರ್ ಗೌಡ 
ರಾಜ್ಯ

ಮಾಸ್ತಿಗುಡಿ ದುರಂತ: ನಿರ್ಮಾಪಕ ಸುಂದರ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ನದಿಗೆ ಹಾರಿದ್ದ ಖಳನಟ ಅನಿಲ್ ಹಾಗೂ ರಾಘವ್ ಉದಯ್ ದುರಂತ ಸಾವು ಪ್ರಕರಣಕ್ಕೆ...

ತಾವರೆಕೆರೆ(ರಾಮನಗರ): ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಂದರ್ಭದಲ್ಲಿ ನದಿಗೆ ಹಾರಿದ್ದ ಖಳನಟ ಅನಿಲ್ ಹಾಗೂ ರಾಘವ್ ಉದಯ್ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕರನ್ನು ಪೊಲೀಸರು ಬಂಧಿಸಿದ್ದಾರೆ. 
ಕಳೆದ ರಾತ್ರಿ ಸುಂದರ್ ಗೌಡರನ್ನು ಬಂಧಿಸಿದ್ದ ತಾವರೆಕೆರೆ ಪೊಲೀಸರು ರಾಮನಗರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಸುಂದರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. 
ಇನ್ನುಳಿದಂತೆ ನಿರ್ದೇಶಕ, ಸಾಹಸ ನಿರ್ದೇಶಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಘಟನೆ ಕುರಿತಂತೆ ಮಾಸ್ತಿಗುಡಿ ಚಿತ್ರ ತಂಡದ ಐವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿತ್ತು. ಐಪಿಸಿ ಸೆಕ್ಷನ್ 304(ಎ) ಹಾಗೂ 308 ಅನ್ವಯ ಕೇಸು ದಾಖಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿರ್ಮಾಪಕ ಸುಂದರ್ ಗೌಡ ಎ-1 ಆರೋಪಿ, ನಿರ್ದೇಶಕ ನಾಗಶೇಖರ್ ಎ-2, ಸಹ ನಿರ್ದೇಶಕ ಎ-3, ಸಾಹಸ ನಿರ್ದೇಶಕ ರವಿವರ್ಮ ಎ-4, ಸಾಹಸ ಸಹ ನಿರ್ದೇಶಕ ಭರತ್ ಎ-5 ಆರೋಪಿ ಎಂದು ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel