ಬೆಂಗಳೂರು: ಕಳೆದ ಎರಡು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆಗೆ ಸಿಕ್ಕಿದ್ದು ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿಯಾಗಿ ಐವರು ನ್ಯಾಯಾಧೀಶರನ್ನು ನೇಮಕ ಮಾಡಿದೆ.
ರಾಜ್ಯದ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರಾದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕಲ್ ಕುನ್ಹಾ ಮತ್ತು ಬಸವರಾಜ್ ಆನಂದ್ ಗೌಡ ಪಾಟೀಲ್ ಅವರನ್ನು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಮೂರ್ತಿಗಳಾಗಿ ಪದೋನ್ನತಿ ನೀಡಿ ಕೇಂದ್ರ ಕಾನೂನು ಸಚಿವಾಲಯದ ಅಧಿಸೂಚನೆ ಹೊರಡಿಸಿದೆ.
ಐವರು ನ್ಯಾಯಮೂರ್ತಿಗಳು ಮುಂದಿನ ಎರಡು ವರ್ಷಗಳ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದು ಮುಂದಿನ ವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.