ಬಸ್ 
ರಾಜ್ಯ

ಬೆಂಗಳೂರು: ಬೈಕ್ ಸವಾರನ ಮೇಲೆ ಹರಿದ ತಮಿಳುನಾಡು ಸರ್ಕಾರಿ ಬಸ್

ತಮಿಳುನಾಡು ಸರ್ಕಾರಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ...

ಬೆಂಗಳೂರು: ತಮಿಳುನಾಡು ಸರ್ಕಾರಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
25 ವರ್ಷದ ಪುಟ್ಟರಾಜು ಮೃತ ದುರ್ದೈವಿ. ಬೆಂಗಳೂರಿನ ಚಿಕ್ಕತೋಗೂರು ಗೇಟ್ ಬಳಿ ಪುಟ್ಟರಾಜು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಆಯಾ ತಪ್ಪಿ ಕೆಳಗೆ ಬಿದ್ದ ಪುಟ್ಟರಾಜು ಮೇಲೆ ಬಸ್ ಹರಿದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದರಿಂದ ಗಲಿಬಿಲಿಗೊಂಡ ಬಸ್ ಚಾಲಕ ಬಸ್ ಸಮೇತ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಮತ್ತೊಬ್ಬ ಬೈಕ್ ಸವಾರ ಬಸ್ ಅನ್ನು ಮಡಿವಾಳದವರೆಗೂ ಹಿಂಬಾಲಿಸಿ ಬಸ್ ಸಮೇತ ಚಾಲಕನನ್ನು ಹಿಡಿದಿದ್ದಾನೆ. 
ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT