ಸಾಂದರ್ಭಿಕ ಚಿತ್ರ 
ರಾಜ್ಯ

ನೋಟ್ ನಿಷೇಧದ ಎಫೆಕ್ಟ್: ಹುಬ್ಬಳಿಯಲ್ಲಿ 60 ಲಕ್ಷ ರು. ನಗದು ಸಾಗಿಸುತ್ತಿದ್ದ ಇಬ್ಬರ ಬಂಧನ

ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಕಪ್ಪು ಹಣ ಹೊಂದಿರುವ ಕುಳಗಳಿಗೆ ದೊಡ್ಡ ತಲೆನೋವಾಗಿದ್ದು,...

ಹುಬ್ಬಳ್ಳಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಕಪ್ಪು ಹಣ ಹೊಂದಿರುವ ಕುಳಗಳಿಗೆ ದೊಡ್ಡ ತಲೆನೋವಾಗಿದ್ದು, ಸೋಮವಾರ ಕಾರಿನಲ್ಲಿ 60 ಲಕ್ಷ ರುಪಾಯಿ ನಗದು ಸಾಗಿಸುತ್ತಿದ್ದ ಇಬ್ಬರನ್ನು ಹುಬ್ಬಳಿಯ ಕೇಶ್ವಾಪುರ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗಿನ ಜಾವ ಕೇಶ್ವಾಪುರದ ಅರಿಹಂತ ನಗರದಿಂದ ಹೊಸಪೇಟೆಗೆ ಹಣ ಸಾಗಿಸುತ್ತಿದ್ದ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ್ ಮೂರ್ತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 60 ಲಕ್ಷ ರುಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಹಣದಲ್ಲಿ ರದ್ದಾದ 500 ಹಾಗೂ 1000 ರು. ಮುಖಬೆಲೆಯ ನೋಟುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳು ಹೊಸಪೇಟೆ ನಿವಾಸಿಗಳಾಗಿದ್ದು, ಪ್ರವೀಣ್ ಜೈನ್ ತನ್ನ ಬಳಿ ಇದ್ದ ಸುಮಾರು 60 ಲಕ್ಷ ರೂಪಾಯಿ ಕಪ್ಪುಹಣವನ್ನು ವೈಟ್ ಮನಿ ಮಾಡಿಕೊಳ್ಳಲು ಪರದಾಡುತ್ತಿದ್ದ. ಈ ಸಂದರ್ಭದಲ್ಲಿ ಜೈನ್ ಗೆ ಕಪ್ಪುಹಣವನ್ನು ಹುಬ್ಬಳ್ಳಿಯಲ್ಲಿ 40 ಪರ್ಸೆಂಟ್ ಕಮಿಷನ್ ಪಡೆದು ವಿನಿಮಯ ಮಾಡಿಕೊಡುತ್ತಾರೆ ಎಂದು ಯಾರೋ ಮಾಹಿತಿ ಕೊಟ್ಟಿದ್ದರು.
ಆ ಮಾಹಿತಿ ನಂಬಿದ್ದ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ್ ಮೂರ್ತಿ ಕಾರಿನಲ್ಲಿ 60 ಲಕ್ಷ ರೂಪಾಯಿ ಹಣವನ್ನು ಹುಬ್ಬಳ್ಳಿಯ ಅರಿಹಂತ್ ಬಡವಾಣೆಯಲ್ಲಿರುವ ತಮ್ಮ ಸಹೋದರಿ ಇರುವ ಬಡಾವಣೆಗೆ ತಂದಿದ್ದರು. ಆದರೆ ಹುಬ್ಬಳ್ಳಿಗೆ ಬಂದಾಗಲೇ ಅವರಿಗೆ ತಪ್ಪಿನ ಅರಿವಾಗಿದ್ದು, ಯಾರೂ ಕೂಡಾ ಕಪ್ಪು ಹಣ ಪಡೆದು, ವಿನಿಮಯ ಮಾಡಿಕೊಳ್ಳುತ್ತಿಲ್ಲ ಎಂಬುದು!
ಹೀಗೆ ಪರದಾಡುತ್ತಿದ್ದಾಗಲೇ 60 ಲಕ್ಷ ರುಪಾಯಿ ಕಪ್ಪು ಹಣದ ವಿಷಯ ಪೊಲೀಸರ ಕಿವಿಗೂ ತಲುಪಿತ್ತು. ಇದೀಗ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ ಮೂರ್ತಿ ಕೇಶ್ವಾಪುರ ಪೊಲೀಸರ ಅತಿಥಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!