ಬೆಂಗಳೂರು: ಟಿಪ್ಪು ಜಯಂತಿ ಸಮಾರಂಭದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನೀರ್ ಸೇಠ್ ಕರೆದಿದ್ದ ಸಭೆಯನ್ನು ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಶಾಸಕರು ಬಹಿಷ್ಕರಿಸಿದ್ದಾರೆ.
ರಾಯಚೂರಿನಲ್ಲಿ ನಡೆದ ಟಿಪ್ಪು ಜಯಂತಿ ಸಮಾರಂಭದಲ್ಲಿ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡುತ್ತಿದ್ದದ್ದು ಖಾಸಗಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಖಾಸಗಿ ಹೋಟೆಲ್ ನಲ್ಲಿ ವಿಧಾನ ಪರಿಷತ್ ಸದಸ್ಯರ ಜೊತೆ ಸಚಿವ ತನ್ವೀರ್ ಸೇಠ್ ಆಯೋಜಿಸಿದ್ದ ಸಭೆಯನ್ನು ಬಹಿಷ್ಕರಿಸಿದ್ದೇವೆ, ಮುಂದೆಯೀ ತನ್ವೀರ್ ಸೇಠ್ ಭಾಗವಹಿಸುವ ಯಾವುದೇ ಸಭೆಯಲ್ಲಿ ಪಾಲ್ಗೋಳ್ಳುವುದಿಲ್ಲ ಎಂದು ಬಿಜೆಪಿ ಎಂಎಲ್ ಸಿ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಆಯೋಜಿಸಲಾಗಿತ್ತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೇತ್ ಕೂಡ ಸಭೆಗೆ ಗೈರಾಗಿದ್ದರು.