ಸಾಂದರ್ಭಿಕ ಚಿತ್ರ 
ರಾಜ್ಯ

2016, ಏಪ್ರಿಲ್ ನಿಂದ ರಾಜ್ಯದಲ್ಲಿ ನಿತ್ಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣು

ರಾಜ್ಯದಲ್ಲಿ ಈ ವರ್ಷ ಏಪ್ರಿಲ್ ವರೆಗೆ ಒಟ್ಟು 457 ರೈತರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಏಪ್ರಿಲ್ ವರೆಗೆ ಒಟ್ಟು 457 ರೈತರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. 
ತೀವ್ರ ಬರಗಾಲದಿಂದ ಬಳಲುತ್ತಿರುವ ಕರ್ನಾಟಕದಲ್ಲಿ ನಿತ್ಯ ಸರಾಸರಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಹಾವೇರಿಯಲ್ಲಿ ಅತಿ ಹೆಚ್ಚು ಅಂದರೆ 48 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ಇನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಎರಡನೇ ಸ್ಥಾನದಲ್ಲಿದ್ದು, ಇಲ್ಲಿ ಒಟ್ಟು 34 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2015-16ರಲ್ಲಿ ಒಟ್ಟು 1,475 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಇತ್ತೀಚಿನ ವರ್ಷಗಳಲ್ಲೇ ಅತಿ ಹೆಚ್ಚು ಎನ್ನಲಾಗಿದೆ. 2013-14ರಲ್ಲಿ 122 ರೈತರು, 2012-13ರಲ್ಲಿ 58 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಮಧ್ಯೆ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗದೆ ಕುಟುಂಬಗಳು ಪರದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷಿ ಇಲಾಖೆ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದ ಎಲ್ಲಾ ರೈತರ ಕುಟುಂಬವನ್ನು ಪರಿಹಾರಕ್ಕೆ ಪರಿಗಣಿಸಲಾಗುವುದಿಲ್ಲ. ಯಾರೂ ಕೃಷಿಗಾಗಿ ಸಾಲ ಪಡೆದು ಅದನ್ನು ತೀರಿಸದೇ ಆತ್ಮಹತ್ಯೆ ಮಾಡಿಕೊಂಡಿದ್ದರೆ ಮಾತ್ರ ಸರ್ಕಾರ ಪರಿಹಾರ ನೀಡುತ್ತದೆ ಎಂದು ಹೇಳಿದ್ದಾರೆ.
457 ಆತ್ಮಹತ್ಯೆ ಪ್ರಕರಣಗಳ ಪೈಕಿ 210 ಪ್ರಕರಣಗಳನ್ನು ಪರಿಹಾರಕ್ಕೆ ಆಯ್ಕೆ ಮಾಡಲಾಗಿದೆ. 74 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 173 ಅರ್ಜಿಗಳು ಜಿಲ್ಲಾಧಿಕಾರಿಗಳ ಬಳಿ ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್