ಸಾಂದರ್ಭಿಕ ಚಿತ್ರ 
ರಾಜ್ಯ

ಬರಪೀಡಿತ ಕರ್ನಾಟಕದಲ್ಲಿ ಮತ್ತಷ್ಟು ಹರಿಯಲಿದೆ ಮದ್ಯದ ಹೊಳೆ

ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ...

ಬೆಳಗಾವಿ: ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮೂಲಕ 900 ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ತಮ್ಮ ತವರು ಜಿಲ್ಲೆ ಹಾಸನದಲ್ಲಿ ಎಂಎಸ್ ಐಎಲ್ ಮಳಿಗೆ ಆರಂಭಿಸಲು ವಿಳಂಭವಾಗುತ್ತಿರುವ ಬಗ್ಗೆ ಚರ್ಚೆ ನಡೆಸಿದರು. ಎಂಎಸ್ ಐಎಲ್ ಮಳಿಗೆ ತೆರೆಯದ ಕಾರಣ ಅನಧಿಕೃತ ಸಾರಾಯಿ ಅಂಗಡಿಗಳಲ್ಲಿ ಹೆಚ್ಚಿನ ದರ ವಿಧಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ಎಚ್ ವೈ ಮೇಟಿ  2014-15ನೇ ಸಾಲಿನಲ್ಲಿ 16, 2015-16ನೇ ಸಾಲಿನಲ್ಲಿ 6 ಮಾರಾಟ ಮಳಿಗೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿಗಳು ಮತ್ತು ಅಬಕಾರಿ ಇಲಾಖೆ ಮೂಲಕ ಸರ್ವೆ ಮಾಡಿಸಿ ಅಗತ್ಯವೆಂದು ಕಂಡು ಬಂದ ಜಾಗಗಳನ್ನು ಗುರುತಿಸಿ ಹೊಸದಾಗಿ 900 ಸಗಟು ಮಾರಾಟ ಮಳಿಗೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 464 ಮಾರಾಟ ಮಳಿಗೆಗಳನ್ನು ಮಂಜೂರು ಮಾಡಲಾಗಿತ್ತು ಆದರೆ 40 ಸಹ ಪ್ರಾರಂಭವಾಗಿಲ್ಲ ಎಂದರು.

ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಜನರಿಗೆ ಕುಡಿಯಲು ನೀರಿಲ್ಲ. ಆದರೆ, ಸರ್ಕಾರ ಮದ್ಯ ಕುಡಿಸಿ ವ್ಯಾಪಾರ ಹೆಚ್ಚು ಮಾಡಿಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT