ರಾಜ್ಯ

ಡಿಕೆ ರವಿ ಸಾವು ಕೊಲೆಯಲ್ಲ, ವೈಯಕ್ತಿಕ ಕಾರಣಗಳಿಗಾಗಿ ಆತ್ಮಹತ್ಯೆ: ಸಿಬಿಐ ವರದಿ

Shilpa D

ಬೆಂಗಳೂರು:  ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ 20 ತಿಂಗಳ ನಂತರ ತನಿಖಾ ವರದಿ ಸಲ್ಲಿಸಿದೆ.

ಡಿ.ಕೆ ರವಿ ಅವರದ್ದು ಕೊಲೆಯಲ್ಲ, ಅದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿಸಿದೆ. ಈ ಸಂಬಂಧ ಸಿಬಿಐ ಅಧಿಕಾರಿಗಳು ಬುಧವಾರ ಬೆಂಗಳೂರು ದಕ್ಷಿಣ ವಿಭಾಗದ ಸಹಾಯಕ ಆಯುಕ್ತ ಟಿ.ಡಿ ನಟೇಶ್ ಅವರಿಗೆ 90 ಪುಟಗಳ  ವರದಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್ 16 2015 ರಂದು ಐಎಎಸ್ ಅಧಿಕಾರಿ ಡಿ.ಕೆ ರವಿ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.ಅನಂತರ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಪ್ರತಿಪಕ್ಷಗಲು ಕೂಡ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದವು.

ವೈಯಕ್ತಿಕ ಕಾರಣಗಳಿಂದಾಗಿಯೇ ಡಿ.ಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಸಷ್ಪಪಡಿಸಿದೆ. ಯಾವುದೇ ಒಂದು ಅಸ್ವಾಭಾವಿಕ ಸಾವಿನ ಪ್ರಕರಣದಲ್ಲಿ ತನಿಖೆ ಮುಗಿದ ನಂತರ ವರದಿಯನ್ನು ಮ್ಯಾಜಿಸ್ಟ್ರೇಟ್ ಗೆ ಸಲ್ಲಿಸುವುದು ವಾಡಿಕೆ. ಆದರೆ ಈ  ಪ್ರಕರಣದಲ್ಲಿ ಅಸಿಸ್ಟೆಂಟ್ ಕಮಿಷನರ್ ಗೆ ವರದಿ ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT