ನವದೆಹಲಿ: ವಿಕೃತ ಕಾಮಿ, ಸರಣಿ ಹಂತಕ ಬಿಎ ಉಮೇಶ್ ರೆಡ್ಡಿಗೆ ನೀಡಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದ್ದು, ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ ಆದಂತಾಗಿದೆ.
2006ರಲ್ಲಿ ನಗರದ ತ್ವರಿತಗತಿ ನ್ಯಾಯಾಲಯ ಉಮೇಶ್ ರೆಡ್ಡಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿತ್ತು. ಈ ಶಿಕ್ಷೆಯನ್ನು 2009ರಲ್ಲಿ ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ತೀರ್ಪನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಕೋರ್ಟ್ ಮೆಟ್ಟಿಲೇರಿದ್ದ.
ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ವಿಧಿಸಿದ್ದ ಗಲ್ಲುಶಿಕ್ಷೆ ತೀರ್ಪನ್ನು ಎತ್ತಿಹಿಡಿದಿದ್ದು ಉಮೇಶ್ ಗೆ ಗಲ್ಲುಶಿಕ್ಷೆ ಖಾಯಂ ಆಗಿದೆ.
ಒಂಟಿಯಾಗಿದ್ದ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಿದ್ದ ಉಮೇಶ್ ರೆಡ್ಡಿ ಅವರನ್ನು ವಿಕೃತವಾಗಿ ಕೊಲೆ ಮಾಡಿ ಅವರ ಬಳಿಯಿದ್ದ ಚಿನ್ನಾಭರಣವನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದ.