ರಾಜ್ಯ

ಬೆಳ್ಳಂದೂರು ಗೇಟ್ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; 8 ಮಂದಿ ಸಿಲುಕಿರುವ ಶಂಕೆ

Srinivasamurthy VN

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಐದು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಸುಮಾರು 8ಕ್ಕೂ ಹೆಚ್ಚು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು  ತಿಳಿದುಬಂದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಮೂರು ಅಗ್ನಿ ಶಾಮಕ ದಳದ ವಾಹನಗಳು  ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಪ್ರಸ್ತುತ ನಾಲ್ಕು ಮಂದಿಯನ್ನು  ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕುಸಿದು ಬಿದ್ದ ಕಟ್ಟಡ ಅದರ ಪಕ್ಕದಲ್ಲೇ ಇದ್ದ ಮತ್ತೊಂದು ಕಟ್ಟಡದ ಮೇಲೆ ಬಿದ್ದಿದ್ದು, ಆ ಕಟ್ಟಡಕ್ಕೂ ಕೂಡ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಕಟ್ಟಡದ ಮಾಲೀಕತ್ವದ ಕುರಿತು ಈ ವರೆಗೂ  ಮಾಹಿತಿ ತಿಳಿದುಬಂದಿಲ್ಲವಾದರೂ, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT