ರಾಜ್ಯ

ಬೆಳ್ಳಂದೂರು ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

Srinivasamurthy VN

ಬೆಂಗಳೂರು: ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮತ್ತೊಂದು ಶವ ಪತ್ತೆಯಾಗಿದ್ದು, ಅವಶೇಷಗಳನ್ನು ತೆರವು ಗೊಳಿಸುವ  ಮೂಲಕ ಶವವನ್ನು ಹೊರತೆಗಿದಿದ್ದಾರೆ. ಆ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದಂತಾಗಿದೆ.

ಕಟ್ಟಡದಲ್ಲಿ ಮತ್ತೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದರ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಶೋಧ ನಡೆಸಲಾಗುತ್ತಿದೆ. ಇನ್ನು ಶೋಧ  ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಸಲಕರಣೆಯೊಂದನ್ನು ಬಳಕೆ ಮಾಡುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಶೋಧಿಸಲು ಅತ್ಯಾಧುನಿಕ ವಿಕ್ಟಿಮ್ ಡಿಟಕ್ಟರ್ ಸಾಧನ ಬಳಕೆ  ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ ಕಟ್ಟಡದ ಗುತ್ತಿಗೆದಾರನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT