ಬಾರ್ ಮತ್ತು ರೆಸ್ಟೋರೆಂಟ್ (ಸಂಗ್ರಹ ಚಿತ್ರ) 
ರಾಜ್ಯ

ರಾತ್ರಿ 1ರವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಅವಧಿ ವಿಸ್ತರಣೆ: ಅಬಕಾರಿ ಸಚಿವ ಹೆಚ್ ವೈ ಮೇಟಿ

ಮದ್ಯಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಕರ್ನಾಟಕ ಸರ್ಕಾರ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.

ಬೆಂಗಳೂರು: ಮದ್ಯಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಕರ್ನಾಟಕ ಸರ್ಕಾರ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು ವಿಸ್ತರಿಸುವ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ ಸ್ವತಃ ಅಬಕಾರಿ ಸಚಿವ ಹೆಚ್ ವೈ ಮೇಟಿ ಅವರು ಸ್ಪಷ್ಟನೆ ನೀಡಿದ್ದು, ಈ ಹಿಂದೆ ವಾರಾಂತ್ಯದಲ್ಲಿ ಮಾತ್ರ ಇದ್ದ ಬಾರ್ ಅವಧಿ ವಿಸ್ತರಣೆಯನ್ನು ಇದೀಗ ವಾರಪೂರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬಾರ್ ಮತ್ತು ರೆಸ್ಟೋರೆಂಟ್ ಗಳ ಸಮಯವನ್ನು 1 ಗಂಟೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ಮೇಟಿ ಅವರು, ಅಬಕಾರಿ ಇಲಾಖೆಯ ವತಿಯಿಂದ ಬಾರ್ ಮತ್ತು ರೆಸ್ಟೋರೆಂಟ್ ಸಮಯವನ್ನು ರಾತ್ರಿ 1ಗಂಟೆಯವರೆಗೂ ವಿಸ್ತರಿಸಲು  ನಿರ್ಧರಿಸಲಾಗಿದೆ. ಆದರೆ ಈ ವಿಸ್ತರಣೆ ಕೇವಲ ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಸಮಯವೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಹಾರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮದ್ಯಮಾರಾಟ ನಿಷೇಧಿಸುವ ಕುರಿತು ಮಾತಾನಾಡಿದ ಮೇಟಿ ಅವರು, "ಆ ಅಧಿಕಾರ ತಮಗಿಲ್ಲ. ನಾನು ಕೇವಲ ಯಾರೂ  ಕುಡಿಯಬೇಡಿ ಎಂದು ಸಲಹೆ ನೀಡಬಹುದು. ಆದರೆ ನೀವು ಕುಡಿಯಲೇ ಬಾರದು ಎಂದು ಕಾನೂನು ಮಾಡುವ ಹಕ್ಕು ತಮಗಿಲ್ಲ. ಈ ಆಧಿಕಾರವಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಮಾತ್ರ. ಅವರು ಬಯಸಿದರೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್