ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಶ್ರೀಗಂಧದ ಮರ ಕತ್ತರಿಸಿದ ಶಾಸಕನ ಸಹೋದರನ ಬಂಧನ

ಶ್ರೀಗಂಧದ ಮರ ಕತ್ತರಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಕೊಂಡ ಶಾಸಕನ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ...

ಚಾಮರಾಜನಗರ: ಶ್ರೀಗಂಧದ ಮರ ಕತ್ತರಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಕೊಂಡ ಶಾಸಕನ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕಮಲಕೇರಿಯಲ್ಲಿ ಶ್ರೀಗಂಧದ ಮರ ಕತ್ತರಿಸಿ ಸಾಗಿಸುತ್ತಿದ್ದ ಆರೋಪದ ಮೇಲೆ ಶಾಸಕ ಪುಟ್ಟರಾಜ ಶೆಟ್ಟಿ ಸಹೋದರ ಪುಟ್ಟರಂಗ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಕಮಲಕೇರಿ ಗ್ರಾಮದ ಭರತ್ ಎಂಬುವರ ಮನೆಯ ಬಳಿಯಿದ್ದ ಗಂಧದ ಮರವನ್ನು ಕತ್ತರಿಸಿದ್ದ ಪುಟ್ಟರಾಜ್ ಶೆಟ್ಟಿ ಅವುಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ ಸಾಗಿಸಲು ಯತ್ನಿಸುತ್ತಿದ್ದ. ಈ ವೇಳೆ ಭರತ್ ನೀಡಿದ ದೂರಿನ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಯಳಂದೂರು ಪೊಲೀಸ್ ಠಾಣೆಯ ಆವರಣದಿಂದಲೂ ಗಂಧದ ಮರವನ್ನು ದುಶ್ಕರ್ಮಿಗಳು ಕತ್ತರಿಸಿ ಸಾಗಾಟ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!