ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ (ಸಂಗ್ರಹ ಚಿತ್ರ) 
ರಾಜ್ಯ

ಸಹಕಾರ ಸಚಿವ ಮಹದೇವ ಪ್ರಸಾದ್ ಗೆ ಕೋರ್ಟ್ ಸಮನ್ಸ್ ಜಾರಿ

ಚುನಾವಣೆ ಸಂದರ್ಭದಲ್ಲಿ ಸುಳ್ಳು ಅಫಿಡವಿಟ್ಟು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ...

ಮೈಸೂರು: ಚುನಾವಣೆ ಸಂದರ್ಭದಲ್ಲಿ ಸುಳ್ಳು ಅಫಿಡವಿಟ್ಟು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಡಿಸೆಂಬರ್ 21ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರಿಗೆ ಗುಂಡ್ಲುಪೇಟೆ ಜೆಎಂಎಫ್ ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
2013ರ ವಿಧಾನಸಭೆ ಚುನಾವಣೆ ವೇಳೆ ಮಹದೇವ್ ಪ್ರಸಾದ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ಟಿನಲ್ಲಿ ಗುಂಡ್ಲುಪೇಟೆ ತಾಲ್ಲೂಕು ಅರೆಪುರ ಗ್ರಾಮದಲ್ಲಿ ಹೊಂದಿರುವ 3.22 ಎಕರೆ ಜಮೀನಿನ ವಿವರವನ್ನು ಘೋಷಿಸಿರಲಿಲ್ಲ ಎಂಬ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.
ಬಿಜೆಪಿ ನಾಯಕ ಎಲ್.ಸುರೇಶ್ 2013 ನವೆಂಬರ್ ನಲ್ಲಿ ಕೇಸು ದಾಖಲಿಸಿದ್ದರು. 2014ರಲ್ಲಿ ಸ್ಥಳೀಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದಾಗ ಸಚಿವರು 2016ರಲ್ಲಿ ಹೈಕೋರ್ಟ್ ನಿಂದ ಅದಕ್ಕೆ ತಡೆ ತಂದಿದ್ದರು. ಪೊಲೀಸರು ಎರಡು ವರ್ಷಗಳವರೆಗೆ ಅವರಿಗೆ ಸಮನ್ಸ್ ಜಾರಿ ಮಾಡಿರಲಿಲ್ಲ. ನಂತರ ದೂರುದಾರ ಸುರೇಶ್ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದರು. ಇದೀಗ ನ್ಯಾಯಾಲಯ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು ಮಹದೇವ್ ಪ್ರಸಾದ್ ಅವರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!