ರಾಜ್ಯ

82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬರಗೂರು ರಾಮಚಂದ್ರಪ್ಪ ಆಯ್ಕೆ

Shilpa D

ಬೆಂಗಳೂರು: ಡಿಸೆಂಬರ್ 2 ರಿಂದ 4 ನೇ ತಾರಿಖೀನವರೆಗೆ ರಾಯಚೂರಿನಲ್ಲಿ ನಡೆಯುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ.

ನವದೆಹಲಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಣಿ ಸಭೆಯಲ್ಲಿ ಬರಗೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

60 ವರ್ಷಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ರಾಯಚೂರು ಅಥವಾ ಹೈದರಾಬಾದ್ ಕರ್ನಾಟಕ ಭಾಗದವರು ಅಧ್ಯಕ್ಷರಾಗೋ ನಿರೀಕ್ಷೆಯಿತ್ತು. ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ಸಾಹಿತಿಗಳಾದ ಜಂಬಣ್ಣ ಅಮರಚಿಂತ, ರಾಜಶೇಕರ್, ಚನ್ನಣ್ಣ ವಾಲಿಕಾರ್, ಪಂಚಾಕ್ಷರಿ ಹಿರೇಮಠ್, ಕೆಪಿ ಜಟ್ಟಿ ಹೆಸರುಗಳಿದ್ದವು. ಆದ್ರೆ ಅಂತಿಮವಾಗಿ ಬರಗೂರು ರಾಮಚಂದ್ರಪ್ಪ ಅವರನ್ನ ಆಯ್ಕೆ ಮಾಡಲಾಗಿದೆ.

ತುಮಕೂರಿನ ಬರಗೂರಿನಲ್ಲಿ ಜನಿಸಿದ ರಾಮಚಂದ್ರಪ್ಪ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು.ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಇವರ ಅನೇಕ ಕಾದಂಬರಿಗಳು ಚಲನ ಚಿತ್ರಗಳಾಗಿದ್ದು, ರಾಜ್ ಹಾಗೂ ರಾಷ್ಟ್ರ ಪ್ರಶಸ್ತಿ ಗಳಿಸಿವೆ.

SCROLL FOR NEXT