ದಸರಾ: ಅರಮನೆ ಹಾಲ್ ನಲ್ಲಿ ಕಸದ ರಾಶಿ ಕುರಿತು ಯದುವೀರ್ ಅಸಮಾಧಾನ 
ರಾಜ್ಯ

ದಸರಾ: ಅರಮನೆ ಹಾಲ್ ನಲ್ಲಿ ಕಸದ ರಾಶಿ ಕುರಿತು ಯದುವೀರ್ ಅಸಮಾಧಾನ

ಇತ್ತೀಚೆಗಷ್ಟೇ ನಡೆದ ಜಂಬೂ ಸವಾರಿ ಮೆರವಣಿಗೆ ವೇಳೆ ಅರಮನೆಯ ದರ್ಬಾರ್ ಹಾಲ್ ನ ಚಿತ್ರಗಳನ್ನು ಗಮನಿಸಿದರೆ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛ ನಗರವೆನಿಸಿಕೊಂಡಿದ್ದು ಇದೆ ಮೈಸೂರಾ ಎಂಬ ಪ್ರಶ್ನೆ....

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ಮೈಸೂರನ್ನು ದೇಶದಲ್ಲೇ ಅತಿ ಸ್ವಚ್ಛ ನಗರ ಎಂದು ಗುರುತಿಸಲಾಗಿತ್ತು. ಆದರೆ ಇತ್ತೀಚೆಗಷ್ಟೇ ನಡೆದ ಜಂಬೂ ಸವಾರಿ ಮೆರವಣಿಗೆ ವೇಳೆ ಅರಮನೆಯ ದರ್ಬಾರ್ ಹಾಲ್ ನ ಚಿತ್ರಗಳನ್ನು ಗಮನಿಸಿದರೆ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛ ನಗರವೆನಿಸಿಕೊಂಡಿದ್ದು ಇದೆ ಮೈಸೂರಾ ಎಂಬ ಪ್ರಶ್ನೆ ಮೂಡುತ್ತದೆ.

ಹೌದು ಜಂಬೂ ಸವಾರಿ ಮೆರವಣಿ ಮುಕ್ತಾಯಗೊಂಡ ನಂತರ ದರ್ಬಾರ್ ಹಾಲ್ ತುಂಬಾ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಣ್ಣಿಗೆ ರಾಚುತ್ತಿತ್ತು. ಹಾಲ್ ನಲ್ಲಿ ಕುಳಿತು ಜಂಬೂ ಸವಾರಿ ವೀಕ್ಷಿಸಿದ ಗಣ್ಯ ವ್ಯಕ್ತಿಗಳೇ ಈ ಘನಕಾರ್ಯ ಮಾಡಿದ್ದಾರೆ ಎಂಬುದು ಮತ್ತೊಂದು ವಿಶೇಷ. ವಿಶ್ವವಿಖ್ಯಾತ ಮೈಸೂರು ದಸರಾವನ್ನು ವೀಕ್ಷಿಸಲು ಗಣ್ಯರಿಗೆ ಹಾಗೂ ಅವರ ಕುಟುಂಬದವರಿಗೆ ದರ್ಬಾರ್ ಹಾಲ್ ನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಗಣ್ಯ ವ್ಯಕ್ತಿಗಳು ಸ್ವಚ್ಛತೆ ಕಾಪಾಡಿ ಸಮಾಜಕ್ಕೆ ಮಾದರಿಯಾಗುವ ಬದಲು ಕುಳಿತ ಸ್ಥಳದಲ್ಲೇ ಮನಸೋ ಇಚ್ಛೆ ಪ್ಲಾಸ್ಟಿಕ್ ವಸ್ತುಗಳನ್ನು, ಅರ್ಧ ತಿಂದುಬಿಟ್ಟ ಆಹಾರ ಪದಾರ್ಥಗಳನ್ನು ಚೆಲ್ಲಾಪಿಲ್ಲಿಯಾಗಿ ಬಿಟ್ಟು ಹೋಗಿದ್ದಾರೆ. ಗಣ್ಯ ವ್ಯಕ್ತಿಗಳ ಈ ಘನಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದು ಮೈಸೂರು ರಾಜವಂಶಸ್ಥ  ಯದುವೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel