ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಕೈನ್ ಮಾರಾಟ: ಬೆಂಗಳೂರಿನಲ್ಲಿ ಇಬ್ಬರು ನೈಜೀರಿಯನ್ನರ ಬಂಧನ

ಮಾದಕ ವಸ್ತು ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಆರೋಪಿಗಳನ್ನು ಶನಿವಾರ ಸಿಸಿಬಿ ಪೊಲೀಸರು ಬಂಧಿಸಿದ್ದು,...

ಬಂಧಿತ ಆರೋಪಿಗಳು
Lingaraj Badiger
Updated On : 15 Oct 2016, 5:52 am
ಬೆಂಗಳೂರು: ಮಾದಕ ವಸ್ತು ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಆರೋಪಿಗಳನ್ನು ಶನಿವಾರ ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 2.5 ಲಕ್ಷ ರುಪಾಯಿ ಮೌಲ್ಯದ 50 ಗ್ರಾಂ ಕೊಕೈನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ದುಬಾ ಜೋಸೆಫ್ (25) ಹಾಗೂ ಸ್ಯಾಂಡಿ ರೋಸ್ (32)  ಎಂದು ಗುರುತಿಸಲಾಗಿದ್ದು, ಅವರಿಂದ ಒಂದು ದ್ವಿಚಕ್ರ ವಾಹನ ಹಾಗೂ ಪಾಸ್ ಪೊರ್ಟ್ ಅನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿರಾನಗರದ 1ನೇ ಹಂತದಲ್ಲಿ ಕೊಕೈನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಶರತ್ ಚಂದ್ರ ಅವರು ತಿಳಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments