ನವೆಂಬರ್ 21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ನವೆಂಬರ್ 21ರಿಂದ ಡಿಸೆಂಬರ್ 2ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು...
ಬೆಂಗಳೂರು: ನವೆಂಬರ್ 21ರಿಂದ ಡಿಸೆಂಬರ್ 2ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ನ. 21ರ ಸೋಮವಾರ ಆರಂಭವಾಗಿ ನವೆಂಬರ್ 25 ರ ವರೆಗೆ ನಡೆಯಲಿದೆ, ನಂತರ ಶನಿವಾರ ಮತ್ತು ಭಾನುವಾರ ರಜೆ ಇದ್ದು ಮತ್ತೆ ನವೆಂಬರ್ 28 ರಂದು ಆರಂಭವಾಗುವ ಕಲಾಪ ಡಿ. 2 ರಂದು ಅಂತ್ಯವಾಗಲಿದೆ. ಒಟ್ಟು 10 ದಿನಗಳ ಕಾಲ ವಿಧಾನ ಮಂಡಲದ ಕಲಾಪಗಳು ನಡೆಯಲಿವೆ.
ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವ ಕುರಿತು ಈಗಾಗಲೇ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ ಜತೆ ಚರ್ಚಿಸಿದ ಬಳಿಕ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.