ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ
ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ...
ಬೆಂಗಳೂರು: ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೊಟೀಸ್ ಹೈಕೋರ್ಟ್ ನೀಡಿದೆ.
ತನಗೆ ನೀಡಿರುವ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಉಮೇಶ್ ರೆಡ್ಡಿ ಸಲ್ಲಿರುವ ರಿಟ್ ಅರ್ಜಿಗೆ 10 ದಿನದೊಳಗೆ ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ವಿಭಾಗಿಯ ಪೀಠ ಸೂಚಿಸಿದೆ.
1998ರಲ್ಲಿ ಉಮೇಶ್ ರೆಡ್ಡಿ ಬೆಂಗಳೂರಿನ ಯಲಹಂಕದಲ್ಲಿ ಜಯಶ್ರೀ ಎಂಬ ಮಹಿಳೆಯ ಕೈಯನ್ನು ಕಟ್ಟಿ ಅತ್ಯಾಚಾರ ಎಸಗಿದ್ದ, ಆ ಬಳಿಕ ಆಕೆಯನ್ನು ಕೊಂದು ಹಾಕಿ ಮನೆಯಲ್ಲಿದ್ದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರ ಫೆಬ್ರುವರಿ 18ರಂದು ಗಲ್ಲು ಶಿಕ್ಷೆ ವಿಧಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.