ಜಯಾ ಪಬ್ಲಿಕೇಷನ್ಸ್‌ ನೀಡಿದ ಚಿನ್ನ ಆಭರಣಗಳಿಂದ ಅಲಂಕೃತಗೊಂಡಿರುವ ಗಣಪತಿ ಮತ್ತು ಹನುಮಂತನ ವಿಗ್ರಹಗಳು. 
ರಾಜ್ಯ

ಜಯಾ ಚೇತರಿಕೆಗಾಗಿ ಚಾಮುಂಡೇಶ್ವರಿಗೆ ರು.1.61 ಕೋಟಿ ಚಿನ್ನದ ಕಾಣಿಕೆ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಆಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ...

ಮೈಸೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಆಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿ ಚಾಮುಂಡೇಶ್ವರಿ ದೇವಾಲಯಕ್ಕೆ 1.61 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಭಿಮಾನಿಗಳು ಕಾಣಿಕೆಯಾಗಿ ನೀಡಿದ್ದಾರೆ.
ಜಯಲಲಿತಾ ಅವರ ಆರಾಧ್ಯ ದೇವಿಯಾಗಿರುವ ಚಾಮುಂಡೇಶ್ವರಿಗೆ ಚಿನ್ನದ ಮುಖವಾಡ, ಆಯುಧಗಳು ಸೇರಿದಂತೆ ದೇವಸ್ಥಾನದ ಆವರಣದಲ್ಲಿರುವ ಗಣಪತಿ, ಹನುಮಂತನ ವಿಗ್ರಹಗಳಿಗೂ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಾಣಿಕೆಯ ರೂಪದಲ್ಲಿ ನೀಡಲಾಗಿದೆ.
ಜಯಾ ಪಬ್ಲಿಕೇಷನ್ಸ್‌ ಎನ್ನುವ ಹೆಸರಿನಲ್ಲಿ 1.61 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.
ಸೆ.22ರಿಂದ ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ