ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರಿಗರ ಪ್ರತಿಭಟನೆ ಹೊರತಾಗಿಯೂ ವಿವಾದಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಬಿಡಿಎ ಚಾಲನೆ!

ಬೆಂಗಳೂರಿಗರ ಪ್ರತಿಭಟನೆ ಹೊರತಾಗಿಯೂ ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ ಕಾಮಕಾರಿ ಆರಂಭಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಲ್ ಅಂಡ್ ಟಿ ಸಂಸ್ಥೆಗೆ ವರ್ಕ್ ಆರ್ಡರ್ ನೀಡಿದೆ.

ಬೆಂಗಳೂರು: ಬೆಂಗಳೂರಿಗರ ಪ್ರತಿಭಟನೆ ಹೊರತಾಗಿಯೂ ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ ಕಾಮಕಾರಿ ಆರಂಭಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಲ್ ಅಂಡ್ ಟಿ ಸಂಸ್ಥೆಗೆ ವರ್ಕ್ ಆರ್ಡರ್ ನೀಡಿದೆ.

ಬೆಂಗಳೂರಿನ ಬಸವೇಶ್ವರ ಸರ್ಕಲ್ ನಿಂದ ಹೆಬ್ಬಾಳದವರೆಗೆ ನಿರ್ಮಾಣವಾಗಲಿರುವ ಬ್ರಿಡ್ಜ್ ನಿರ್ಮಾಣಕ್ಕೆ ಅಧಿಕೃತ ಚಾಲನೆ ನೀಡಿದ್ದು, ಬ್ರಿಡ್ಜ್ ನಿರ್ಮಾಣಕ್ಕೆ ಬಿಡಿಎ 95 ಕೋಟಿ ರು,.ಹಣವನ್ನು ಕೂಡ ಬಿಡುಗಡೆ ಮಾಡಿದೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಟೆಂಡರ್ ಪಡೆದಿದ್ದ ಎಲ್ ಅಂಡ್ ಟಿ ಸಂಸ್ಥೆಗೆ ಬಿಡಿಎ ವರ್ಕ್ ಆರ್ಡರ್ ನೀಡಿದ್ದು, ಬಿಡಿಎ ಇಇ ರಮೇಶ್ ಅವರು ಇಂದು ಅಧಿಕೃತವಾಗಿ ಎಲ್ ಅಂಡ್ ಟಿ ಸಂಸ್ಥೆಗೆ ವರ್ಕ್ ಆರ್ಡರ್ ನೀಡಿದ್ದಾರೆ.

ಇದೇ ಆಕ್ಟೋಬರ್ 20ರಂದು ನಡೆದ ಬಿಡಿಎ ಕೌನ್ಸಿಲ್ ಸಭೆಯಲ್ಲಿ ವರ್ಕ್ ಆರ್ಡರ್ ನೀಡುವ ಕುರಿತು ಅನುಮೋದನೆ ಪಡೆಯಲಾಗಿದ್ದು, ಅದರಂತೆ ಇಂದು ಎಲ್ ಅಂಡ್ ಸಂಸ್ಥೆಗೆ ವರ್ಕ್ ಆರ್ಡರ್ ನೀಡಲಾಗಿದೆ. ಮೂಲಗಳ ಪ್ರಕಾರ ಇದೇ ನವೆಂಬರ್ 1ರಿಂದ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ವಿರೋಧವಾಯ್ತು, ಸ್ಟೀಲ್ ಬ್ರಿಡ್ಜ್ ಪರವಾಗಿ ಹೆಬ್ಬಾಳದಲ್ಲಿ ಹೋರಾಟ ಆರಂಭ

ಅತ್ತ ಸ್ಟೀಲ್ ಬ್ರಿಡ್ಜ್ ಗೆ ಬಿಡಿಎ ವರ್ಕ್ ಆರ್ಡರ್ ನೀಡುತ್ತಿದ್ದಂತೆಯೇ ಇತ್ತ ಹೆಬ್ಬಾಳದಲ್ಲಿ ಸ್ಟೀಲ್ ಬ್ರಿಡ್ಜ್ ಪರವಾಗಿ ಹೋರಾಟಗಳು ಕೂಡ ಪ್ರಾರಂಭವಾಗಿದೆ. ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೆ ನಿರ್ಮಾಣವಾಗುವ ಬ್ರಿಡ್ಜ್ ನಿಂದಾಗಿ ನಗರದ ಸೌಂದರ್ಯಕ್ಕೆ ಧಕ್ಕೆಯಾಗುವುದಲ್ಲದೇ, ನೂರೂರು ಮರಗಳು ನಾಶವಾಗುತ್ತವೆ ಎಂಬ ಪರಿಸರವಾದಿಗಳ ವಿರೋಧದ ನಡುವೆಯೇ ಹೆಬ್ಬಾಳದಲ್ಲಿ ಸ್ಟೀಲ್ ಬ್ರಿಡ್ಜ್ ಬೇಕು ಎಂದು ಆಗ್ರಹಿಸಿ ಸ್ಥಳೀಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.

ಹೆಬ್ಬಾಳದ ಸಮೀಪದ ನ್ಯಾಯಾಂಗ ಬಡಾವಣೆಯ ಕೊಡಿಗೆಹಳ್ಳಿ, ಏರ್ ಪೋರ್ಟ್ ರಸ್ತೆ, ಅಮೃತಹಳ್ಳಿ, ಸಹಕಾರ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ಆಗಮನದಿಂದ ಇಲ್ಲಿನ ವಾಹನ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೇ ಪರಿಸರ ಸಂರಕ್ಷಣೆಯಾಗುತ್ತದೆ ಮತ್ತು ಇಲ್ಲಿನ  ಅಪಘಾತಗಳ ಸಂಖ್ಯೆಯೂ ಇಳಿಕೆಯಾಗುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!