ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್(ಸಂಗ್ರಹ ಚಿತ್ರ) 
ರಾಜ್ಯ

ನಿಗಮ, ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿಸಲು ಸಿದ್ದು, ಪರಂ ದೆಹಲಿಗೆ ಪ್ರಯಾಣ

ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಹೈಕಮಾಂಡ್ ಜೊತೆ ಚರ್ಚಿಸಿ ಅನುಮತಿ ಪಡೆಯಲು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ. 
ಈ ಕುರಿತು ಸ್ವತಃ ಸಿದ್ದರಾಮಯ್ಯ ಇಂದು ಮೈಸೂರಿನ ನಂಜನಗೂಡಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿದ್ದಾರೆ. ಈ ಮೂವರು ನಾಯಕರು ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ನಿಗಮ ಮಂಡಳಿಗಳು ಹಾಗೂ ಮೇಲ್ಮನೆಯಲ್ಲಿ ಖಾಲಿ ಇರುವ ಮೂರು ಸ್ಥಾನಗಳ ನೇಮಕಾತಿಗೆ ಒಪ್ಪಿಗೆ ಪಡೆದು ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. 
95ಕ್ಕೂ ಹೆಚ್ಚು ನಿಗಮಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡಲು ಈಗಾಗಲೇ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಕಳೆದ ಬಾರಿ ನಿಗಮ ಮಂಡಳಿ ನೇಮಕಾತಿ ಸಂಬಂಧ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಯವರು ಕೆಲವು ಮಾರ್ಗದರ್ಶನಗಳನ್ನು ರೂಪಿಸಿ ನೇಮಕಾತಿ ಮಾಡಿ ಎಂಬ ಸಲಹೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಜಾತಿ ಸಮೀಕರಣ, ಪ್ರಾದೇಶಿಕತೆ, ಪಕ್ಷ ನಿಷ್ಠೆ, ಮುಂಬರುವ ವಿಧಾನಸಭೆ ಚುನಾವಣೆಗೆ ಆಗಬಹುದಾದ ಪ್ರಯೋಜನೆಗಳನ್ನು ಲೆಕ್ಕ ಹಾಕಿಕೊಂಡು ಪಟ್ಟಿಯನ್ನು ಸಿದ್ಧ ಮಾಡಿದ್ದು, ನಾಳೆ ಹೈಕಮಾಂಡ್ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!