ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಟಿಪ್ಪು ಆಚರಣೆಗೆ ಸರ್ಕಾರ ಬದ್ಧವಾಗಿದೆ: ಮುಖ್ಯಮಂತ್ರಿ

ಸರ್ಕಾರ ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ಮುಖ್ಯಮಂತ್ರಿ ಸಿದ್ದರಾಮಯ್ಯ
Sumana Upadhyaya
Updated On : 23 Oct 2016, 5:39 am
ಮೈಸೂರು: ಸರ್ಕಾರ ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಹೋರಾಡಿದ ವೀರ  ಟಿಪ್ಪುವಿನ ಜಯಂತಿ ಆಚರಿಸುವುದು ದೇಶ ಪ್ರೇಮದಿಂದಲೇ ಹೊರತು ಅದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಆರ್‍ಎಸ್‍ಎಸ್ -ಸಂಘ ಪರಿವಾರದವರು ಅಸ್ತಿತ್ವಕ್ಕೆ ಬಂದಾಗಿನಿಂದ ಇದಕ್ಕೆ ಬೇರೆ ಅರ್ಥ ಕಲ್ಪಿಸಿ ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ. ಸಮಾಜದ ಸಾಮರಸ್ಯಕ್ಕೆ ಹುಳಿ ಹಿಂಡುತ್ತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಸಂಸದ ಯಡಿಯೂರಪ್ಪನವರು ಬರೀ ಸುಳ್ಳುಗಳನ್ನೇ ಹೇಳುತ್ತಾ ಬಂದಿದ್ದಾರೆ.ಯಾವೊಬ್ಬ ನಾಯಕರೂ ಕಾಂಗ್ರೆಸ್ ನಾಯಕರು ಬಿಜೆಪಿ ಸೇರುತ್ತಿಲ್ಲ ಎಂದು ತಿಳಿಸಿದರು.

Advertisement

Advertisement

ಈ ತಿಂಗಳ ಒಳಗೆ ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಿಸಲಾಗುವುದು. ಬೆಂಗಳೂರಿನಲ್ಲಿ ಸ್ಟೀಲ್ ಮೇಲ್ಸೇತುವೆ ವಿಚಾರವಾಗಿ ಜಾಲತಾಣದಲ್ಲಿ ಸುಮಾರು ಶೇ.೭೩ ರಷ್ಟು ಜನ ಅಭಿಪ್ರಾಯ ತಿಳಿಸಿದ್ದಾರೆ. ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement