ಶಿವಮೊಗ್ಗ: ಬೆಂಗಳೂರು ಮೂಲದ ಅಪ್ರಾಪ್ತೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಾರೂಖ್ ಮತ್ತು ತೋಫಿಕ್ ಎಂಬ ಆರೋಪಿಗಳನ್ನ ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಎಸ್ ಪಿ ಅಭಿನವ್ ಖರೆ ತಿಳಿಸಿದ್ದಾರೆ,
ಸೆಪ್ಟಂಬರ್ 7 ರಂದು ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆಗೆ ಸಹಾಯ ನೀಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು, ಪ್ರಕರಣ ಸಂಬಂಧ ಈ ಮೊದಲು ನಾಲ್ವರನ್ನು ಬಂಧಿಸಲಾಗಿತ್ತು.