ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರಿನಲ್ಲಿ ಲಾರಿ-ಬಸ್ ಮುಖಾಮುಖಿ ಡಿಕ್ಕಿ; 7 ಸಾವು

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ ಸೇರಿ ಏಳು ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಅಪಘಾತ
Vishwanath S
Updated On : 26 Oct 2016, 11:43 am

ಮೈಸೂರು: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ ಸೇರಿ ಏಳು ಮಂದಿ ದಾರುಣ ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಧುಗಿರಿಕೊಪ್ಪಳು ಬಳಿ ಈ ಅಪಘಾತ ಸಂಭವಿಸಿದ್ದು, ಸರ್ಕಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೆ.ಆರ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

ಸರ್ಕಾರಿ ಬಸ್ ಚಾಲಕ 45 ವರ್ಷದ ಸದಾಶಿವ ಹಾಗೂ ನಿರ್ವಾಹಕ 28 ವರ್ಷದ ದೇವರಾಜ್ ಎಂದು ಗುರುತಿಸಲಾಗಿದೆ. ಬಸ್ ವಿರಾಜಪೇಟೆಯಿಂದ ಮೈಸೂರಿಗೆ ಬರುತ್ತಿತ್ತು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments