ಮೈಸೂರು: ನೀರಿನ ಕೊರತೆ, ಸಾಲಬಾಧೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಈ ವರೆಗೂ 34 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ ಲಕ್ಷ್ಮೀನಾರಾಯಣ ಅವರು ನಿನ್ನೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಜಿಲ್ಲಾಡಳಿತ ಮಂಡಳಿ ರೈತರ ಕುರಿತ ಮಾಹಿತಿಗಳನ್ನು ಬಹಿರಂಗಪಡಿಸಿದೆ.
ಸಭೆಯಲ್ಲಿ ಉಪ ಆಯುಕ್ತ ಡಿ. ರಂದೀಪ್ ಅವರು ಮಾತನಾಡಿದ್ದು, ಈ ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ 34 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ 18 ಮಂದಿ ರೈತಲು ಬೆಳೆ ನಾಶದಿಂದ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.