ಮಾನವಿ(ರಾಯಚೂರು): ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದಾರುಣ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 8 ಮಂದಿಗೆ ಗಾಯಗಳಾಗಿವೆ.
ಮಾನವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.