ರಾಜ್ಯೋತ್ಸವ ಪ್ರಶಸ್ತಿ: ಮಾರ್ಗಸೂಚಿ ಅನುಸರಿಸುವಂತೆ ಸರ್ಕಾರಕ್ಕೆ 'ಹೈ' ಆದೇಶ
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ರೂಪಿಸಿರುವ ಮಾರ್ಗಸೂಚಿಗಳನ್ನು ಶೀಘ್ರವೇ ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ...
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ರೂಪಿಸಿರುವ ಮಾರ್ಗಸೂಚಿಗಳನ್ನು ಶೀಘ್ರವೇ ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಬಿ.ವಿ.ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಲೇವಾರಿ ಮಾಡಿದ್ದು, ಅರ್ಜಿದಾರರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಆದೇಶಿಸಿದೆ.
ಇದೇ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿದ ನಜೀರ್, ಈ ಬಾರಿ ಸತ್ಯನಾರಾಯಣ ಅವರನ್ನ ಪ್ರಶಸ್ತಿಗೆ ಪರಿಗಣಿಸಿದ್ದೀರೊ ಇಲ್ಲವೊ ಎಂದು ಪ್ರಶ್ನಿಸಿದರು. ಇದಕ್ಕೆ ಶಿವಣ್ಣ, ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.