ಸಾಂದರ್ಭಿಕ ಚಿತ್ರ 
ರಾಜ್ಯ

ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕರಾವಳಿ ಕರ್ನಾಟಕದ ಜನಪದ ಕ್ರೀಡೆಗಳಲ್ಲಿ ಒಂದಾದ ಕೋಣಗಳ ಸ್ಪರ್ಧೆ ಕಂಬಳಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು: ಕರಾವಳಿ ಕರ್ನಾಟಕದ ಜನಪದ ಕ್ರೀಡೆಗಳಲ್ಲಿ ಒಂದಾದ ಕೋಣಗಳ ಸ್ಪರ್ಧೆ ಕಂಬಳಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ.
ನವೆಂಬರ್ 19ರಂದು ನಡೆಯುವ ಕಂಬಳಕ್ಕೆ ಸ್ಥಳೀಯ ಆಡಳಿತ ಅನುಮತಿ ನೀಡದಿರುವುದನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಂಬಳ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಅನುಮತಿ ನೀಡಿ ಆದೇಶಿಸಿದ್ದಾರೆ.
ಡಿಸೆಂಬರ್ 17, 2015ರ ರಾಜ್ಯ ಸರ್ಕಾರದ ಆದೇಶದಂತೆ ಕೋಣಗಳಿಗೆ ಯಾವುದೇ ರೀತಿಯ ಹಿಂಸೆ ನೀಡದೆ, ಅವುಗಳಿಗೆ ಉತ್ತಮ ಆಹಾರ ಹಾಗೂ ನೀರು ನೀಡುವ ಮೂಲಕ ಈ ಸ್ಪರ್ಧೆ ನಡೆಸಬೇಕು ಕೋರ್ಟ್ ಸೂಚಿಸಿದೆ.
ಕಂಬಳವು ನವಂಬರ್ ತಿಂಗಳಿನಿಂದ ಪ್ರಾರಂಭವಾಗಿ ಮಾರ್ಚ್ ವರೆಗೂ ಕರಾವಳಿ ಕರ್ನಾಟಕದ ವಿವಿಧ ಭಾಗಗಳಲ್ಲಿ ನಿಗದಿಪಡಿಸಲಾದ ದಿನಗಳಂದು ನಡೆಯುತ್ತದೆ. ಭಗವಂತನು ತಮ್ಮ ಜಾನುವಾರಗಳನ್ನು ರಕ್ಷಿಸುತ್ತಿರುವುದರ ಗೌರವಾರ್ಥವಾಗಿಯೂ ಈ ಕಂಬಳ ಉತ್ಸವವನ್ನು ಕೆಲ ಗ್ರಾಮಗಳಲ್ಲಿ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT