ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ್ 
ರಾಜ್ಯ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ್

ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ ಆರ್ ಹಿರೇಮಠ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದು, 200 ಎಕರೆ ಭೂಕಬಳಿಕೆ ಆಗಿದೆ ಎಂದು ಆರೋಪಿಸಿದ್ದಾರೆ.

ಹುಬ್ಬಳ್ಳಿ: ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ ಆರ್ ಹಿರೇಮಠ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದು, 200 ಎಕರೆ ಭೂಕಬಳಿಕೆ ಆಗಿದೆ ಎಂದು ಆರೋಪಿಸಿದ್ದಾರೆ.

ರಾಮನಗರದ ಕೆಟಗಾನಹಳ್ಳಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರಿಂದ 200 ಎಕರೆ ಭೂ ಕಬಳಿಕೆ ಆಗಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ದಾಖಲೆ ಬಿಡುಗಡೆ ಮಾಡಿ ಮಾತನಾಡಿರುವ ಎಸ್ ಆರ್ ಹಿರೇಮಠ್, ಕಬಳಿಕೆ ಆಗಿರುವ ಜಮೀನನ್ನು ವಶಕ್ಕೆ ಪಡೆಯುವ ವಿಷಯವನ್ನು ಕಂದಾಯ ಇಲಾಖೆ ಆದೇಶ ರಾಮನಗರ ಜಿಲ್ಲಾಧಿಗಳ ಗಮನಕ್ಕೆ ತಂದಿದ್ದರೂ, ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಹಿರೇಮಠ್ ಆರೋಪಿಸಿದ್ದಾರೆ.   
 
110 ಎಕರೆ ಗೋಮಾಳ ಸೇರಿದಂತೆ ಪರಿಶಿಷ್ಟ ಜಾತಿಗೆ ಹಂಚಿಕೆಯಾಗಿದ್ದ 200 ಎಕರೆಯನ್ನು ಕುಮಾರಸ್ವಾಮಿ ಹಾಗು ಅವರ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ. ಸರ್ಕಾರ ಕುಮಾರಸ್ವಾಮಿ ಅವರಿಂದ ಕೂಡಲೇ ಜಮೀನು ವಾಪಸ್ ಪಡೆಯಬೇಕೆಂದು ಹಿರೇಮಠ್  ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ