ರಾಜ್ಯ

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ: ಮಂಗಳೂರು ವಿವಿಗೆ ರಾಯರೆಡ್ಡಿ ಭೇಟಿ

Manjula VN

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ದೊರಕಿದ್ದ ಹಿಡನ್ ಕ್ಯಾಮೆರಾ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು ವಿವಿಗೆ ಭೇಟಿ ನೀಡಿ ಶುಕ್ರವಾರ ಪರಿಶೀಲನೆ ನಡೆಸಿದರು.

ಭೇಟಿ ವೇಳೆ ರಾಯರೆಡ್ಡಿಯವರೊಂದಿಗೆ ಮಾತುಕತೆ ನಡೆಸಿದ ವಿವಿಯ ಆಡಳಿತ ಮಂಡಳಿಯು, ವಿಶ್ವವಿದ್ಯಾಲಯದ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿಲ್ಲ ಎಂದು ಹೇಳಿದರು.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ ರಾಯರೆಡ್ಡಿಯವರು, ಭದ್ರತೆ ಕುರಿತಂತೆ ನಮ್ಮಿಂದ ಯಾವುದೇ ಸಮಸ್ಯೆಗಳು ಉಂಟಾಗಿಲ್ಲ. ಪ್ರತೀ ಬಾರಿ ಶೌಚಾಲಯವನ್ನು ತಪಾಸಣೆ ಮಾಡಲು ಸಾಧ್ಯವಾಗುವುದಿಲ್ಲ. ಪ್ರಸ್ತುತ ವಿಶ್ವವಿದ್ಯಾಲಯ ಪ್ರಕರಣವನ್ನು ದಾಖಲು ಮಾಡಿದೆ. ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಈ ಕುರಿತಂತೆ ಸಮಿತಿಯೊಂದನ್ನು ಈಗಾಗಲೇ ರಚನೆ ಮಾಡಲಾಗಿದೆ. ಪ್ರಕರಣದ ಎಲ್ಲಾ ಕಾರ್ಯವನ್ನು ಸಮಿತಿಯೇ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಘಟನೆ ಸೈಬರ್ ಕ್ರೈಂಗೆ ಸಂಬಂಧಿಸಿದ್ದು, ಪ್ರಕರಣವನ್ನು ಸೈಬರ್ ಕ್ರೈಮ್ ಪೊಲೀಸರಿಗೆ ವರ್ಗಾಯಿಸಲಾಗುವುದು ಎಂದು ಕೊಣಾಜೆ ಪೊಲೀಸರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

SCROLL FOR NEXT