ಬೆಂಗಳೂರು: ಮನೆ ಮಾಲಕಿ ಮೇಲೆ ಹಲ್ಲೆ, ಚಿನ್ನಾಭರಣ ದೋಚಿ ಆಕೆಯ ಕಾರಿನಲ್ಲೇ ಪರಾರಿ
ಕೆಲಸ ಮಾಡುತ್ತಿದ್ದ ಮನೆ ಮಾಲಕಿಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನಾಭರಣ ಕಸಿದು ಕಾರು ಚಾಲಕ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ..
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆ ಮಾಲಕಿಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನಾಭರಣ ಕಸಿದು ಕಾರು ಚಾಲಕ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜೆಪಿ ನಗರದ ಎಲ್ಅಂಡ್ ಟಿ ಸೌತ್ ಸಿಟಿ ಅಪಾರ್ಟ್ಮೆಂಟ್ನಲ್ಲಿ ಸುನಂದಾ ಎಂಬುವರ ಕಾರು ಚಾಲಕ ನಾಗೇಶ್ ಈ ದುಷ್ಕೃತ್ಯವೆಸಗಿ ನಂತರ ಕಾರಿನೊಡನೆ ಪರಾರಿಯಾಗಿದ್ದಾನೆ.
ಸುನಂದಾ ಅವರನ್ನು ಕಾರಿನಲ್ಲಿ ಡ್ರಾಪ್ ಮಾಡಿದ ಬಳಿಕ ಪಾರ್ಕಿಂಗ್ನಲ್ಲಿ ಕಾರು ನಿಲ್ಲಿಸಿದ ಚಾಲಕ ಸುನಂದಾಗೆ ಚಾಕುವಿನಿಂದ ಇರಿದು ಚಿನ್ನಾಭರಣವನ್ನು ಕಸಿದುಕೊಂಡು ಹೋಗಿದ್ದಾನೆ. ಕಳೆದ ಆರು ತಿಂಗಳಿಂದ ನಾಗೇಶ್ ಸುನಂದಾ ಅವರ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಸುನಂದಾ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಲ್ಲಿ ನೆರೆದಿದ್ದ ಜನರು ಆಸ್ಪತ್ರೆಗೆ ಸೇರಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸುನಂದಾ ಅವರು ಅಪಾಯದಿಂದ ಪಾರಾಗಿದ್ದು ಆರೋಪಿ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.