ಕಾವೇರಿ ನೀರು ಹಂಚಿಕೆ ವಿವಾದ: ಕೆಆರ್'ಎಸ್ ಬಳಿ ಹೆಚ್ಚಿದ ಭದ್ರತೆ
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಇಂದು ಆದೇಶ ಹೊರಡಿಸುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದ ಬಳಿ ಸೋಮವಾರ ಭದ್ರತೆಯನ್ನು ಹೆಚ್ಚಿಸಲಾಗಿದೆ...
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಇಂದು ಆದೇಶ ಹೊರಡಿಸುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದ ಬಳಿ ಸೋಮವಾರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಶೇ.50 ರಷ್ಟು ನೀರನ್ನು ಬಿಡುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಸುಪ್ರೀಂ ಆದೇಶ ನೀಡುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಈಗಾಗಲೇ ಬೃಂದಾವನ ಉದ್ಯಾನವನ, ಉತ್ತರ ದ್ವಾರ, ಕಾವೇರಿ ಪ್ರತಿಮೆ ಮತ್ತು ಇನ್ನಿತರೆ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಐಜಿಪಿ (ದಕ್ಷಿಣ ವಿಭಾಗ) ಬಿ.ಕೆ. ಸಿಂಗ್ ಅವರು, ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ರಾಜ್ಯದ ವಿರುದ್ಧವೇನಾದರೂ ಆದೇಶ ಹೊರಬಿದ್ದಿದ್ದೇ ಆದರೆ, ಪರಿಸ್ಥಿತಿ ಹದಗೆಡುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.