ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು 
ರಾಜ್ಯ

ಕಾವೇರಿ ನೀರು ವಿವಾದ: ರಾಜ್ಯ ಸಂಚಾರ ವ್ಯವಸ್ಥೆ ಮೇಲೆ ಪ್ರತಿಭಟನೆ ಬಿಸಿ

ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸುಪ್ರೀಂ ನೀಡಿದ್ದ ತೀರ್ಪು ಇಡೀ ರಾಜ್ಯವನ್ನೇ ಹೊತ್ತಿ ಉರಿಯುವಂತೆ ಮಾಡಿದ್ದು, ಪ್ರತಿಭಟನೆ ಪರಿಣಾಮ ರಾಜ್ಯದ ಸಂಚಾರ...

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸುಪ್ರೀಂ ನೀಡಿದ್ದ ತೀರ್ಪು ಇಡೀ ರಾಜ್ಯವನ್ನೇ ಹೊತ್ತಿ ಉರಿಯುವಂತೆ ಮಾಡಿದ್ದು, ಪ್ರತಿಭಟನೆ ಪರಿಣಾಮ ರಾಜ್ಯದ ಸಂಚಾರ ವ್ಯವಸ್ಥೆಯ ಮೇಲೆ ಬೀರಿದೆ.
 
ಸುಪ್ರೀಂ ಆದೇಶವನ್ನು ಪಾಲಿಸಿದ್ದ ರಾಜ್ಯ ಸರ್ಕಾರ ತಮಿಳುನಾಡಿಗೆ ನಿನ್ನೆಯಷ್ಟೇ 16 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರದ ಈ ನಡೆಗೆ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಬೆಂಕಿ ಹೆಚ್ಚುವ ಮೂಲಕ ರಾಜ್ಯ ಸರ್ಕಾರ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದಾಗಿ ನಗರ ಹಲವೆಡೆ ಸಂಚಾರ ದಟ್ಟಣೆ ಆರಂಭವಾಗಿತ್ತು.

ಇದಲ್ಲದೆ, ನಗರದ ಫ್ರೀಡಂಪಾರ್ಕ್ ನಲ್ಲೂ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು.

ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಲಾರಿ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಶುಕ್ರವಾರ 6 ಲಕ್ಷಕ್ಕೂ ಹೆಚ್ಚು ಲಾರಿಗಳ ಸಂಚಾರವನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ನಾಳೆ ಆಚರಿಸಲಾಗುವ ಕರ್ನಾಟಕ ಬಂದ್ ಬಿಬಿಎಂಪಿ ಉದ್ಯೋಗಿಗಳು ಹಾಗೂ ಕೇಬಲ್ ಆಪರೇಟರ್ಸ್ ಸಂಘ ಹಾಗೂ ಖಾಸಗಿ ಸಂಸ್ಥೆಗಳೂ ಕೂಡ ಸಾಥ್ ನೀಡಿದೆ. ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!