ಬೆಂಗಳೂರಿನಲ್ಲಿ ಬಂದ್ ಎಫೆಕ್ಟ್ (ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿಗಾಗಿ ಬಂದ್: ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ದ!

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ ನಿಂದಾಗಿ ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ದವಾಗಿದ್ದು, ಸರ್ಕಾರಿ ಸಾರಿಗೆ ಸೇವೆ ಇಲ್ಲದೇ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ಥವ್ಯಸ್ಥವಾಗಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ ನಿಂದಾಗಿ ರಾಜಧಾನಿ ಬೆಂಗಳೂರು ಸಂಪೂರ್ಣ  ಸ್ಥಬ್ದವಾಗಿದ್ದು, ಸರ್ಕಾರಿ ಸಾರಿಗೆ ಸೇವೆ ಇಲ್ಲದೇ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಬೆಳಗ್ಗೆಯಿಂದಲೇ ಬೀದಿಗಿಳಿದಿರುವ ಕನ್ನಡಪರ ಹೋರಾಟಗಾರರು ರಸ್ತೆ ಮಧ್ಯೆ ಪ್ರತಿಭಟನೆ ನಡೆಸುತ್ತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ  ವ್ಯಕ್ತಪಡಿಸುತ್ತಿದ್ದಾರೆ. ಬಂದ್ ಗೆ ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ ಗೆ  ಬೆಂಬಲ ನೀಡುತ್ತಿದ್ದಾರೆ. ಪ್ರಮುಖವಾಗಿ ಕೃಷ್ಣ ರಾಜ ಮಾರುಕಟ್ಟೆ, ಕೆಆರ್ ಪುರಂ ಮಾರುಕಟ್ಟೆ, ಯಶವಂತಪುರ ಎಪಿಎಂಸಿ ಮಾರುಕಟ್ಟೆ, ಜಯನಗರ ಹಾಗೂ ಗಾಂಧಿ ಬಜಾರ್ ಮಾರುಕಟ್ಟೆಗಳು  ಸಂಪೂರ್ಣ ಮುಚ್ಚಲ್ಪಟ್ಟಿವೆ.

ಇನ್ನು ಬಂದ್ ನಿಮಿತ್ತ ಮೆಜೆಸ್ಟಿಕ್ ನಲ್ಲಿ ಎಲ್ಲ ರೀತಿಯ ಸಾರಿಗೆ ಬಸ್ ಸೇವೆ ಸ್ಥಗಿತಗೊಂಡಿದ್ದು, ಬಂದ್ ವಿಚಾರ ತಿಳಿಯದ ಪ್ರಯಾಣಿಕರ ಪರದಾಟ ಸಾಮಾನ್ಯವಾಗಿತ್ತು. ಸದಾಕಾಲ  ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹೆಬ್ಬಾಳ ಜಂಕ್ಷನ್ ಬಿಕೋ ಇನ್ನುತ್ತಿದ್ದು, ಬಸ್ ಗಳಿಲ್ಲದೇ ಜನರು ಪರದಾಡುವಂತಾಗಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರವೇ ಕಾರ್ಯಕರ್ತರು  ಪ್ರತಿಭಟನೆ ನಡೆಸುತ್ತಿದ್ದು, ಮೆಜೆಸ್ಟಿಕ್ ನಲ್ಲಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ರಸ್ತೆಗಳಿದಿದ್ದ ಚ್ಯಾಕ್ಸಿ ಹಾಗೂ ಆಟೋಗಳನ್ನು ವಾಪಸ್ ಅಟ್ಟುವ ಮೂಲಕ ತಮ್ಮ ಆಕ್ರೋಶ  ವ್ಯಕ್ತಪಡಿಸಿದರು.

ಒಟ್ಟಾರೆ ಕರ್ನಾಟಕ ಬಂದ್ ಗೆ ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್