ಮಂಡ್ಯ: ಕಾವೇರಿ ಜಲ ವಿವಾದ ಸಂಬಂಧ ಶನಿವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಶನಿವಾರ ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಲಿದ್ದು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ನಡೆದ ಕರ್ನಾಟಕ ಬಂದ್ ವೇಳೆ ನಾಳೆ ಮಂಡ್ಯಕ್ಕೆ ತೆರಳುವುದಾಗಿ ಘೋಷಿಸಿದ್ದ ವಾಟಾಳ್ ನಾಗರಾಜ್ ಅವರು ಇಂದು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದು, ಅವರೊಂದಿಗೆ ಸಾರಾಗೋವಿಂದು ಸೇರಿದಂತೆ ಹಲವು ಕನ್ನಡ ಪರ ಹೋರಾಟಗಾರರೂ ಕೂಡ ಮಂಡ್ಯಗೆ ಆಗಮಿಸುವ ಸಾಧ್ಯತೆ ಇದೆ. ಮಂಡ್ಯ ಭೇಟಿ ವೇಳೆ ಕನ್ನಡ ಪರನಾಯಕರು ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾರನ್ನು ಭೇಟಿ ಮಾಡಿ ಕಾವೇರಿ ವಿವಾದ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಅಂತೆಯೇ ಕಾವೇರಿ ವಿವಾದ ಸಂಬಂಧ ಮನವಿ ಕೂಡ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಳಿಕ ಎಲ್ಲ ಕನ್ನಡಪರ ನಾಯಕರು ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.