ಕೆಆರ್ ಎಸ್ ನಲ್ಲಿ ಬಿಗಿ ಪೊಲೀಸ್ ಭದ್ರತೆ (ಸಂಗ್ರಹ ಚಿತ್ರ) 
ರಾಜ್ಯ

"ಕಾವೇರಿ"ದ ಪ್ರತಿಭಟನೆ: ಮಂಡ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ

ಕಾವೇರಿ ಬಂದ್ ಬಳಿಕ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿರುವ ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.

ಮಂಡ್ಯ: ಕಾವೇರಿ ಬಂದ್ ಬಳಿಕ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿರುವ ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ  ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.

ಬಂದ್ ಬಳಿಕ ಮಂಡ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆಯಾದರೂ, ರೈತರ ಆಕ್ರೋಶ ಯಾವುದೇ ಸಮಯದಲ್ಲಿ ಭುಗಿಲೇಳುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ  ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರು ಶಾಲಾ-ಕಾಲೇಜುಗಳಿಗೆ ರಜೆ ಮುಂದುವರೆಸಿದ್ದಾರೆ. ಅಂತೆಯೇ ಮಂಡ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒದಗಿಸಲಾಗಿರುವ ಭದ್ರತೆಯನ್ನು  ಬಿಗಿಗೊಳಿಸಲಾಗಿದ್ದು, ಪ್ರಮುಖವಾಗಿ ಕೃಷ್ಣ ರಾಜ ಸಾಗರದ ಬೃಂದಾವನದ ಬಳಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.

ಅಂತೆಯೇ ಸೆಪ್ಟೆಂಬರ್ 16ರವರೆಗೂ ಕೃಷ್ಣರಾಜ ಸಾಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.

ನಿನ್ನೆ ಬಂದ್ ವೇಳೆ ಬೃಂದಾವನಕ್ಕೆ ನುಗ್ಗಿದ್ದ ಆಪಾರ ಪ್ರಮಾಣದ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ವೇಳೆ ಆಕೋರ ಭರಿತ ರೈತರನ್ನು ನಿಯಂತ್ರಿಸಲು ಪೊಲೀಸರು  ಲಾಠಿಚಾರ್ಜ್ ನಡೆಸಿದ್ದರು. ಪೊಲೀಸರ ಈ ಕ್ರಮ ತೀವ್ರ ಖಂಡನೆಗೆ ಗುರಿಯಾಗಿತ್ತು. ಈ ಸಂಬಂಧ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮಂಡ್ಯ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು, ರೈತರು ನದಿಗೆ ಹಾರಿ  ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಹೀಗಾಗಿ ಅವರನ್ನು ತಡೆಯಲು ಲಾಠಿಚಾರ್ಜ್ ಮಾಡಲಾಗಿತ್ತು. ಒಂದು ವೇಳೆ ಲಾಠಿ ಚಾರ್ಜ್ ಮಾಡದೇ ಹೋಗಿದ್ದರೆ ಪರಿಸ್ಥಿತಿ ಕೈ ಮೀರುವ ಸಾಧ್ಯತೆ  ಇತ್ತು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!