ಕಾವೇರಿ ನೀರು ತಮಿಳು ನಾಡಿಗೆ ಬಿಡುಗಡೆ ಮಾಡಬಾರದೆಂದು ಪ್ರತಿಭಟನೆ ನಡೆಸುತ್ತಿರುವ ಜನರು. 
ರಾಜ್ಯ

ದಿನಕ್ಕೆ 10 ಸಾವಿರ ಕ್ಯೂಸೆಕ್ ನೀರು ಬಿಡಲು ನಿಗದಿಪಡಿಸುವಂತೆ ಕರ್ನಾಟಕ ಸುಪ್ರೀಂಗೆ ಒತ್ತಾಯ

ಸುಪ್ರೀಂ ಕೋರ್ಟ್ ನೇತೃತ್ವದ ಮೇಲುಸ್ತುವಾರಿ ಸಮಿತಿ ಕರ್ನಾಟಕ ಮತ್ತು ತಮಿಳು ನಾಡಿನಲ್ಲಿ ಕಾವೇರಿ...

ಬೆಂಗಳೂರು: ಸುಪ್ರೀಂ ಕೋರ್ಟ್ ನೇತೃತ್ವದ ಮೇಲುಸ್ತುವಾರಿ ಸಮಿತಿ ಕರ್ನಾಟಕ ಮತ್ತು ತಮಿಳು ನಾಡಿನಲ್ಲಿ ಕಾವೇರಿ ನೀರಿನ ಲಭ್ಯತೆಯ ವಾಸ್ತವವನ್ನು ತಿಳಿಯಲು ತನ್ನ ವಿಚಾರಣೆಯನ್ನು ಭಾನುವಾರ ಆರಂಭಿಸಲಿದೆ. 
ಕಾವೇರಿ ನೀರು ಬಿಡುಗಡೆ ವಿಷಯದಲ್ಲಿ ತಮಿಳು ನಾಡು ಸಲ್ಲಿಸಿದ ಅರ್ಜಿಗೆ ಸಂಬಂಧಪಟ್ಟಂತೆ ರಾಜ್ಯದ ಪ್ರತಿಕ್ರಿಯೆಯನ್ನು ಮೇಲುಸ್ತುವಾರಿ ಸಮಿತಿ ಆಲಿಸಲಿದೆ ಎಂದು ಕರ್ನಾಟಕ ಕಾನೂನು ತಜ್ಞರ ತಂಡದ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. 2013ರಲ್ಲಿ ರಚಿಸಲಾದ ಮೇಲುಸ್ತುವಾರಿ ಸಮಿತಿಯಿಂದ ನ್ಯಾಯ ಸಿಗುವ ಭರವಸೆಯಲ್ಲಿದೆ ಕರ್ನಾಟಕ. ಇದು ಕಾವೇರಿ ನದಿ ಪ್ರಾಧಿಕಾರಕ್ಕೆ ಬದಲಾಗಿ ರಚಿಸಲ್ಪಟ್ಟ ಸಮಿತಿಯಾಗಿದೆ.
ಇಂದು ಮೇಲುಸ್ತುವಾರಿ ಸಮಿತಿಗೆ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಅದರಲ್ಲಿ ಇನ್ನು 5 ದಿನಗಳವರೆಗೆ ದಿನಕ್ಕೆ 10 ಸಾವಿರ ಕ್ಯೂಸೆಕ್ ನಂತೆ ತಮಿಳು ನಾಡಿಗೆ ನೀರು ಬಿಡಬಹುದಾಗಿದ್ದು, ತಮಿಳು ನಾಡಿಗೆ 15 ಸಾವಿರ ಕ್ಯೂಸೆಕ್ ಗೆ ಬದಲು 10 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶವನ್ನು ಮಾರ್ಪಾಡು ಮಾಡಬೇಕೆಂದು ಕರ್ನಾಟಕ ಕೋರಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಸೆಪ್ಟೆಂಬರ್ 7ರಂದು ತಮಿಳು  ನಾಡಿಗೆ ನೀರು ಬಿಡಲು ಕರ್ನಾಟಕ ಆರಂಭಿಸಿತ್ತು. ಈಗಾಗಲೇ ಕಾವೇರಿ ಜಲಾನಯನದ 4 ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಸಾಮಾನ್ಯ ವರ್ಷಗಳಲ್ಲಿ ಇರುವ 94 ಟಿಎಂಸಿ ನೀರಿಗೆ ಬದಲಾಗಿ 46.79 ಟಿಎಂಸಿ ನೀರು ಮಾತ್ರ ಇದೆಯಷ್ಟೆ. ಇನ್ನು 28 ಟಿಎಂಸಿ ನೀರು ಬೆಂಗಳೂರು, ಮಂಡ್ಯ, ಮೈಸೂರು ಮತ್ತು ಸುತ್ತಮುತ್ತಲ ಹಳ್ಳಿಗಳಿಗೆ ಕುಡಿಯಲು ಬೇಕಾಗಿದೆ. 
ಕಾವೇರಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ಅಂತಿಮ ವಿಚಾರಣೆ ಅಕ್ಟೋಬರ್ 18ರಂದು ನಡೆಯಲಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವನ್ನು ನಿನ್ನೆ ಕಾನೂನು ಸಚಿವ ಟಿ.ಬಿ.ಜಯಚಂದ್ರ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರನ್ನು ಬದಲಾಯಿಸುವ ವಿಷಯವನ್ನೂ ಅವರು ತಳ್ಳಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!