ಬೆಂಗಳೂರು: ಸುಪ್ರೀಂಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದಿದ್ದು ಮುಂಜಾಗ್ರತೆ ಕ್ರಮವಾಗಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರಿ ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನಾಕಾರರು ರಾಜ್ಯಾದ್ಯಂತ ತಮಿಳುನಾಡು ನೋಂದಣಿಯ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು ಪ್ರತಿಯೊಬ್ಬ ಕಚೇರಿಯನ್ನು ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಹಿಂಸಾಚಾರ ಭುಗಿಲೆಳುತ್ತಿದ್ದಂತೆ ಕೆಲವು ಭಾಗಗಳಿಗೆ ಬಿಎಂಟಿಸಿ ಬಸ್ ಸೇವೆ ಸ್ಧಗಿತಗೊಂಡಿರುವುದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಇನ್ನು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಾಗೂ ವಾಹನಗಳ ಮೇಲೆ ಉದ್ರಿಕ್ತರು ದಾಳಿ ಮಾಡುತ್ತಿರುವುದರಿಂದ ತಮಿಳುನಾಡಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳ ಸೇವೆಯನ್ನು ಸ್ಧಗಿತಗೊಳಿಸಲಾಗಿದೆ.