ಸಿದ್ದರಾಮಯ್ಯ 
ರಾಜ್ಯ

ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ತೀರ್ಮಾನಿಸಿದ್ದೇವೆ: ಸಚಿವ ಸಂಪುಟ ಸಭೆ ಬಳಿಕ ಸಿಎಂ ಹೇಳಿಕೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ನಡೆಯುತ್ತಿದ್ದ ತುರ್ತು ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ನಡೆಯುತ್ತಿದ್ದ ತುರ್ತು ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 
ನೆರೆ ರಾಜ್ಯಕ್ಕೆ ಕಾವೇರಿ ನೀರನ್ನು ಹರಿಸುವುದನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದ ಪರಿಣಾಮ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನೀರು ಬಿಡುವುದರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಂದರೆ ಸುಪ್ರೀಂ ಕೋರ್ಟ್ ನ ಆದೇಶ ಪಾಲನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗಾಗಲೆ ಮನವಿ ಮಾಡಲಾಗಿದೆ. ಇದೇ ವಿಚಾರವಾಗಿ ಮತ್ತೊಮ್ಮೆ ಮನವಿ ಮಾಡಲು ಪ್ರಧಾನಿ ಮೋದಿ ಅವರ ಭೇಟಿಗಾಗಿ ಸಮಯ ಕೇಳಲಾಗಿದ್ದು, ಪ್ರಧಾನಿ ಕಚೇರಿಯಿಂದ ನಾಳೆ(ಸೆ.14ರಂದು) ಸಮಯ ನಿಗದಿಯಾಗಿದೆ. ಪ್ರಧಾನಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 
ಮಂತ್ರಿ ಪರಿಷತ್ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ನೀರು ಬಿಡಲು ಸೆ.5ರಂದು ಹಾಗೂ ಸೆ.12 ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಸುಪ್ರೀಂ ಕೋರ್ಟ್ ನ ಪಾಲಿಸಲು ಕಷ್ಟವಾಗಿದ್ದರೂ ನ್ಯಾಯಾಂಗ ನಿಂದನೆ, ಕೋರ್ಟ್ ಆದೇಶದ ಉಲ್ಲಂಘನೆ ಆರೋಪ ಕೇಳಿಬರುವ ಸಾಧ್ಯತೆ ಇರುವುದರಿಂದ ಎಲ್ಲಾ ಸಾಧಕ-ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ತೀರ್ಮಾನಿಸಲಾಗಿದ್ದು ಎಂದು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿರುವುದರ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದಿರುವ ಸಿಎಂ, ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 
ಬೆಂಗಳೂರು ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ನಗರ, ಬೆಂಗಳೂರಿಗೆ ತನ್ನದೇ ಆದ ಘನತೆ ಇದ್ದು, ಕಾನೂನನ್ನು ಕೈಗೆತ್ತಿಕೊಳ್ಳುವುದರಿಂದ ಜನಜೀವನ ಅಸ್ತವ್ಯಸ್ತವಾಗಲಿದೆ. ಜನಜೀವನ ಅಸ್ತವ್ಯಸ್ತವಾಗಬಾರದು, ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ ಬರಬೇಕು, ಆದ್ದರಿಂದ " ಯಾರೇ ಆದರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸೋಮವಾರ ನಗರದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಕನ್ನಡಿಗರ ಆಕ್ರೋಶಕ್ಕೆ ಸುಟ್ಟು ಕರಕಲಾಗಿದ್ದು ಬರೋಬ್ಬರಿ 77 ವಾಹನಗಳು, 30 ವಾಹನ ಜಖಂ, 28 ಪೊಲೀಸರಿಗೆ ಗಾಯ, ಗಲಭೆ ಸಂಬಂಧ 335 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!