ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಾವೇರಿ ವಿವಾದ: ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಪ್ರಧಾನಿ ಬಗ್ಗೆ ಸಿಎಂ ಅಸಮಾಧಾನ

ಕಾವೇರಿ ವಿವಾದದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 8 ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ
Srinivas Rao BV
Updated On : 13 Sept 2016, 2:18 am
ಬೆಂಗಳೂರು: ಕಾವೇರಿ ವಿವಾದದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 8 ಪತ್ರ ಬರೆದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿಷಯವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆರೋಪಿಸಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಗಳಿಗೆ ಬೆಲೆ ಇಲ್ಲವಾ ಎಂದು ಸಿಎಂ ಪ್ರಶ್ನಿಸಿದ್ದಾರೆ.
ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯುಸೆಕ್ಸ್ ನೀರು ಹರಿಸುವಂತೆ ನೀಡಿದ್ದ ಆದೇಶವನ್ನು ಮಾರ್ಪಾಡು ಮಾಡಬೇಕು ಎಂದು ಕರ್ನಾಟಕ ಅರ್ಜಿ ಸಲ್ಲಿಸಿದ ಹೊರತಾಗಿಯೂ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯುಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನ ಆದೇಶ ಬಂದ ನಂತರ ಕರ್ನಾಟಕದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಮಧ್ಯ ಸಿಎಂ ಸಿದ್ದರಾಮಯ್ಯ ಕಾವೇರಿ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ ಈ ವರೆಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments