ರೈಲು ಟಿಕೆಟ್ ಖರೀದಿಗೂ ಇನ್ನು ಆಧಾರ್ ಕಡ್ಡಾಯ!
ವಿವಿಧ ಸರ್ಕಾರಿ ಕೆಲಸಗಳಿಗೆ ಹಾಗೂ ವಿವಿಧ ಸರ್ಕಾರಿ ಸಬ್ಸಿಡಿ ಪಡೆಯಲು ಕಡ್ಡಾಯವಾಗಿರುವ ಆಧಾರ್ ಕಾರ್ಡ್ ಇನ್ನು ರೈಲ್ವೇ ಟಿಕೆಟ್ ಖರೀದಿಯಲ್ಲೂ ಕಡ್ಡಾಯಗೊಳಿಸಲು ಕೇಂದ್ರ ರೈಲ್ವೇ ಇಲಾಖೆ ಚಿಂತನೆ ನಡೆಸಿದೆ.
ನವದೆಹಲಿ: ವಿವಿಧ ಸರ್ಕಾರಿ ಕೆಲಸಗಳಿಗೆ ಹಾಗೂ ವಿವಿಧ ಸರ್ಕಾರಿ ಸಬ್ಸಿಡಿ ಪಡೆಯಲು ಕಡ್ಡಾಯವಾಗಿರುವ ಆಧಾರ್ ಕಾರ್ಡ್ ಇನ್ನು ರೈಲ್ವೇ ಟಿಕೆಟ್ ಖರೀದಿಯಲ್ಲೂ ಕಡ್ಡಾಯಗೊಳಿಸಲು ಕೇಂದ್ರ ರೈಲ್ವೇ ಇಲಾಖೆ ಚಿಂತನೆ ನಡೆಸಿದೆ.
ಟಿಕೆಟ್ ಖರೀದಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ಖರೀದಿಗೂ ಆಧಾರ್ ಸಂಖ್ಯೆ ಕಡ್ಡಾಯ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಸದ್ಯದ ಯೋಜನೆ ಪ್ರಕಾರ, ಕಾಯ್ದಿರಿಸಿದ ಮತ್ತು ಸಾಮಾನ್ಯ ಟಿಕೆಟ್ಗಳ ಖರೀದಿಗೆ ಜೊತೆಗೆ ಆನ್ಲೈನ್ ಹಾಗೂ ರೈಲ್ವೆ ನಿಲ್ದಾಣದ ಕೌಂಟರ್ ಖರೀದಿಗೂ ಕೂಡಾ ಆಧಾರ್ ಸಂಖ್ಯೆ ಕಡ್ಡಾಯ ಮಾಡಲಾಗುವುದು.
ಇದರಿಂದ ಮಧ್ಯವರ್ತಿಗಳ ಹಾವಳಿ ತಡೆಯುವ ಜೊತೆಗೆ, ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು, ಅಂಗವಿಕಲರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರಿಗೆ ರಿಯಾಯಿತಿ ಪಡೆಯಲು ಅನುಕೂಲವಾಗುತ್ತದೆ ಎಂಬುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ. ಪ್ರಮುಖವಾಗಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸುವುದರಿಂದ ಕೇವಲ ಮಧ್ಯವರ್ತಿಗಳ ಹಾವಳಿ ತಡೆಗಟ್ಟುವುದಲ್ಲದೇ ಪ್ರಯಾಣಿಕರ ವಯಸ್ಸಿನ ಸಂಬಂಧಿತ ಮೋಸ ಪ್ರಕರಣಗಳನ್ನೂ ಕೂಡ ಈ ಕ್ರಮದಿಂದ ಸುಲಭವಾಗಿ ತಡೆಗಟ್ಟಬಹುದಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ಸರ್ಕಾರದ ಈ ನೂತನ ಕ್ರಮ ಡಿಸೆಂಬರ್ 2016ರಿಂದ ಜಾರಿಗೆ ಬರುವ ಸಾಧ್ಯತೆಗಳಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.