ಯೂಟ್ಯೂಬ್ ಚಿತ್ರ 
ರಾಜ್ಯ

ವೈರಲ್ ಆದ ಹಳೆಯ ವಿಡಿಯೋ; ಬೆಂಗಳೂರು ಶಾಂತಿ ಕದಡಲು ಕಿಡಿಗೇಡಿಗಳ ಯತ್ನ!

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಬೆಂಗಳೂರು ಈಗಷ್ಟೇ ಶಾಂತಿಯುತವಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಶಾಂತಿಗೆ ಭಂಗತರಲು ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ...

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾದ ಬೆನ್ನಲ್ಲೇ ಹೊತ್ತಿ ಉರಿದಿದ್ದ ಬೆಂಗಳೂರು ಈಗಷ್ಟೇ ಶಾಂತಿಯುತವಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಬೆಂಗಳೂರು ಶಾಂತಿಗೆ  ಭಂಗತರಲು ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ.

ಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ವಾಟ್ಸಪ್ ಗಳಲ್ಲಿ ಆಟೋದಲ್ಲಿ ಬಂದ ಮಹಿಳೆಯರನ್ನು ದುಷ್ಕರ್ಮಿಗಳು ಥಳಿಸುತ್ತಿರವ ವಿಡಿಯೋವನ್ನು ಹಾಕಿ ಅದಕ್ಕೆ ಕನ್ನಡಿಗ ಮತ್ತು  ತಮಿಳರ ನಡುವಿನ ಸಂಘರ್ಷದ ಲೇಪನ ಮಾಡಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ವಾಯ್ಸಪ್ ಮತ್ತು ಫೇಸ್ ಬುಕ್ ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.


ಆದರೆ ಸತ್ಯಾಂಶವೇನು ಎಂದರೆ ಕಾವೇರಿ ವಿವಾದಕ್ಕೂ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋಗೂ ಯಾವುದೇ ಸಂಬಂಧವಿಲ್ಲ. ಇಷ್ಟಕ್ಕೂ ಈ ವಿಡಿಯೋ  ಯೂಟ್ಯೂಬ್ ನಲ್ಲಿ ಅಪ್ಲೋಡ್ ಆಗಿರುವುದೇ 2014 ಏಪ್ರಿಲ್ ತಿಂಗಳಲ್ಲಿ. ಆದರೆ ಇದೇ ವಿಡಿಯೋವನ್ನು ತಮ್ಮ ಕುಕೃತ್ಯಕ್ಕೆ ಬಳಕೆ ಮಾಡಿಕೊಂಡಿರುವ ಕಿಡಿಗೇಡಿಗಳು ಆಟೋದಲ್ಲಿ  ಥಳಿತಕ್ಕೊಳಗಾಗಿರುವ ಹೆಣ್ಣುಮಗಳು ಕನ್ನಡತಿಯರಾಗಿದ್ದು, ತಮಿಳರು ಆಕೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಆದರೆ ಈ ವಿಡಿಯೋ ವೈಯುಕ್ತಿಕ ಜಗಳದ್ದಾಗಿದ್ದು, ಈ ವಿಡಿಯೋಗೂ ಕಾವೇರಿ ಗಲಾಟೆಗೂ ಯಾವುದೇ ಸಂಬಂಧವಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!