ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರಿ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ನಕ್ಸಲೈಟ್ ರಮೇಶ್

ಬಂಧನಕ್ಕೊಳಗಾಗಿರುವ ನಕ್ಸಲ್ ಮುಖಂಡ ರಮೇಶ್ ಅಲಿಯಾಸ್ ಶಿವಕುಮಾರ್ ಸರ್ಕಾರಿ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ವಿಚಾರ ಇದೀಗ...

ಚಿಕ್ಕಮಗಳೂರು: ಬಂಧನಕ್ಕೊಳಗಾಗಿರುವ ನಕ್ಸಲ್ ಮುಖಂಡ ರಮೇಶ್ ಅಲಿಯಾಸ್ ಶಿವಕುಮಾರ್ ಸರ್ಕಾರಿ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ವಿಚಾರ ಇದೀಗ ತಿಳಿದುಬಂದಿದೆ.

ಚಿಕ್ಕಮಗಳೂರು ಪೊಲೀಸರ ವಶದಲ್ಲಿರುವ ರಮೇಶ್ ನನ್ನು ಅಧಿಕಾರಿಗಳು ಅಜ್ಞಾತ ಸ್ಥಳವೊಂದಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಶೃಂಗೇರಿ ಮತ್ತು ಕೊಪ್ಪದಲ್ಲಿರುವ ಸರ್ಕಾರಿ ಕಚೇರಿಗಳ ಮೇಲೆ ಈ ತಿಂಗಳ ಅಂತಿಮ ದಿನಗಳಲ್ಲಿ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿಚಾರಣೆ ವೇಳೆ ಸ್ವತಃ ರಮೇಶ್ ಈ ವಿಚಾರವನ್ನು ಬಾಯ್ಬಿಟ್ಟಿದ್ದು, ಸರ್ಕಾರಿ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು ಎಂದು ಹೇಳಿದ್ದಾನೆಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದ ವಿರುದ್ಧ 5-6 ನಕ್ಸಲರು ಸಂಚು ರೂಪಿಸುತ್ತಿದ್ದು, ನಕ್ಸಲರ ಗುಂಪಿನಲ್ಲಿ ವನಜಾಕ್ಷಿ, ಮುಂಡಗಾರು ಲತಾ, ಸುರೇಶ್ ಅಲಿಯಾಸ್ ಪ್ರದೀಪ್ ಮತ್ತು ಜಾನ್ ಎಂಬುವವರು ಇದ್ದಾರೆ. ವಿಕ್ರಮ್ ಗೌಡ ಮತ್ತು ಬಿ.ಜಿ. ಕೃಷ್ಣಮೂರ್ತಿ ಇಬ್ಬರೂ ಕೇರಳ ರಾಜ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

ಇನ್ನು ನಕ್ಸಲರ ಗುಂಪಿನಲ್ಲಿ ಕುಪ್ಪುಸ್ವಾಮಿ ಪ್ರಮುಖನಾಗಿದ್ದು. ಕುಪ್ಪುಸ್ವಾಮಿಗೆ ರಮೇಶ್ ಮಾಹಿತಿಯನ್ನು ರವಾನಿಸುತ್ತಿದ್ದ. ದಕ್ಷಿಣ ಭಾರತದಲ್ಲಿ ಏನೇ ಸಂಚು ರೂಪಿಸಬೇಕೆಂದಿದ್ದರೂ ಅದು ಕುಪ್ಪುಸ್ವಾಮಿ ಅಡಿಯಲ್ಲಿಯೇ ಬರುತ್ತದೆ. ಕುಪ್ಪುಸ್ವಾಮಿ ಹಾಗೂ ರಮೇಶ್ ಇಬ್ಬರನ್ನು ಜೊತೆಯಾಗಿ ಬಂಧಿಸಲು ಬಲೆ ಬೀಸಲಾಗಿತ್ತು. ಆದರೆ, ಕುಪ್ಪುಸ್ವಾಮಿ ತಪ್ಪಿಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ನಕ್ಸಲ್ ಚಟುವಟಿಕೆ ಪಸರಿಸಲು ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಮೂಲತಃ ರಾಯಚೂರಿನವನು. ಆಂಧ್ರದ ಕ್ರಾಂತಿಕಾರಿ ನಾಯಕ ಗದ್ದರ್ನಿಂದ ಪ್ರಭಾವಕ್ಕೊಳಗಾಗಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ. 2003ರಲ್ಲಿ ಪಾರ್ವತಿ ಅಲಿಯಾಸ್ ಫಾತಿಮಾ ಎಂಬುವವರನ್ನು ವಿವಾಹವಾಗಿದ್ದ. 2003ರ ನವೆಂಬರ್ 17 ರಂದು ಈರದಲ್ಲಿ ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಪಾರ್ವತಿ ಬಲಿಯಾಗಿದ್ದರು. ನಂತರ ರಮೇಶ್ ಯಾರ ಕಣ್ಣಿಗೂ ಕಾಣಿಸದೆ ತಲೆಮರೆಸಿಕೊಂಡಿದ್ದ. ರಮೇಶ್ ವಿರುದ್ಧ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟಿರುವುದಾಗಿ ರಮೇಶ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.  ನಗರದಲ್ಲಿ ಬಂಧಿತನಾದ ರಮೇಶ್ ನನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ತೀವ್ರವಾಗಿ ವಿಚಾರಣೆಗೊಳಪಡಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್