ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ತೆಗಂಪುರ್ ಟ್ಯಾಂಕ್ ನಲ್ಲಿ ಉಕ್ಕಿ ಹರಿಯುತ್ತಿರುವ ನೀರು 
ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಮೂವರು ಬಲಿ

ಉತ್ತರ ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಮೂವರು ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ...

ಕಲಬುರ್ಗಿ: ಉತ್ತರ ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಮೂವರು ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.

ಮಳೆಯ ಆಗಮನ ಒಂದೆಡೆ ರೈತರಿಗೆ ಖುಷಿಯನ್ನು ತಂದಿದ್ದರೆ, ಮತ್ತೊಂದೆಡೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಮನೆಗಳು ಕುಸಿದುಬಿದ್ದಿದ್ದರೆ, ಮತ್ತೊಂದೆಡೆ ಸೇತುವೆಗಳ ಮೇಲೆ ನೀರು ತುಂಬಿ ಸಂಚಾರ ವ್ಯವಸ್ಥೆಗಳಿಗೆ ತೊಂದರೆಗಳು ಉಂಟಾಗಿದ್ದವು.

ಕಲಬುರ್ಗಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆ ಕುಸಿದುಬಿದ್ದು ಭೀಮಳ್ಳಿ ಗ್ರಾಮದ ನಾಗಪ್ಪ (53) ಎಂಬುವವರು ಸಾವನ್ನಪ್ಪಿದ್ದಾರೆ. ಬೀದರ್ ನ ಹುಮಾನಾಬಾದ್ ತಾಲೂಕಿನಲ್ಲಿ ಸೇತುವೆ ದಾಟುವ ವೇಳೆ ಪ್ರಕಾಶ್ ಎಂಬುವವರು ಕೊಚ್ಚಿಕೊಂಡು ಹೋಗಿದ್ದಾರೆ. ಬಿಲ್ಬಲ್ಲಿ ಗ್ರಾಮದ ಬಳಿ ಕಗಿನ ನದಿಯಲ್ಲಿ ಬಿದ್ದು ಅನಾಮಧೇಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದ ಹಲವೆಡೆ ನಿನ್ನೆ ಮಧ್ಯಮ ಮಟ್ಟದಲ್ಲಿ ಮಳೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಕಡಿಮೆ ಮಟ್ಟದಲ್ಲಿ ಮಳೆಯಾಗಿದೆ. ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ 43 ಮಿ.ಮೀ ಮತ್ತು ಬೀದರ್ ನ ಬಸವಕಲ್ಯಾಣದಲ್ಲಿ 20 ಮಿ.ಮೀ ನಷ್ಟು ಮಳೆಯಾಗಿದೆ. ಇನ್ನು ನಗರದಲ್ಲೂ ಹಲವೆಡೆ ವರುಣನ ಆರ್ಭಟ ಜೋರಾಗಿಯೇ ಇತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!