ಅನುಪಮಾ ಶೆಣೈ 
ರಾಜ್ಯ

ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಯೂ ಟರ್ನ್ : ಮತ್ತೆ ಖಾಕಿ ಧರಿಸಲು ನಿರ್ಧಾರ

ಕೂಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಈಗ ಯು-ಟರ್ನ್‌ ತಗೊಂಡಿದ್ದಾರೆ. ಅನುಪಮಾ ಶೆಣೈ ತಮ್ಮ ನಿರ್ಧಾರದಲ್ಲಿ ಯು-ಟರ್ನ್‌ ತೆಗೆದುಕೊಂಡಿದ್ದಾರೆ...

ಮಂಗಳೂರು: ಕೂಡ್ಲಿಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಈಗ ಯು-ಟರ್ನ್‌ ತಗೊಂಡಿದ್ದಾರೆ. ಅನುಪಮಾ ಶೆಣೈ ತಮ್ಮ ನಿರ್ಧಾರದಲ್ಲಿ ಯು-ಟರ್ನ್‌ ತೆಗೆದುಕೊಂಡಿದ್ದಾರೆ. ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.

ರಾಜೀನಾಮೆ ವಾಪಸ್ ಪಡೆಯುವ ಕುರಿತು ಆ.29ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಆ ಬಳಿಕ ಮುಖ್ಯಮಂತ್ರಿಯವರು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ್ದಾರೆ. ಪೊಲೀಸ್ ವ್ಯವಸ್ಥೆಯಲ್ಲಿರುವ ಲೋಪದೋಷದಿಂದ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಲು ಯತ್ನಿಸಿದ್ದೇನೆ. ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಸಂದರ್ಭ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಅವರು ಕೂಡ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಅನುಪಮಾ ಹೇಳಿದರು.

ರಾಜೀನಾಮೆ ಸಲ್ಲಿಸಿದ ಐದು ದಿನಗಳಲ್ಲಿ ಅದು ಸ್ವೀಕೃತಗೊಂಡಿತ್ತು. ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಪತ್ರ ಬರೆದ ಒಂದು ತಿಂಗಳ ಬಳಿಕವೂ ಅದು ಇತ್ಯರ್ಥಗೊಂಡಿಲ್ಲ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿದಾಗ ನೋಡೋಣ ಎಂಬ ಉತ್ತರ ಸಿಕ್ಕಿತ್ತು. ಆಗ ತನ್ನ ರಾಜೀನಾಮೆಯ ತೀರ್ಮಾನವನ್ನು ಹೆಚ್ಚಿನ ಜನರು ಒಪ್ಪಿಕೊಂಡಿಲ್ಲ. ಇದಕ್ಕೆ ಜನರಿಂದ ಆಕ್ಷೇಪಗಳು ಬಂದಿವೆ. ಆದ್ದರಿಂದ ನಿರ್ಧಾರವನ್ನು ಬದಲಾಯಿಸಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!