ಸುಪ್ರೀಂ ನಲ್ಲಿ ಕಾವೇರಿ ವಿಚಾರಣೆ: ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ 
ರಾಜ್ಯ

ಸುಪ್ರೀಂ ನಲ್ಲಿ ಕಾವೇರಿ ವಿಚಾರಣೆ: ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಕಾವೇರಿ ವಿವಾದದ ಅರ್ಜಿ ವಿಚಾರಣೆ ಸೆ.20 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳ ಸೂಕ್ಷ್ಮ/ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಂಗಳೂರು: ಕಾವೇರಿ ವಿವಾದದ ಅರ್ಜಿ ವಿಚಾರಣೆ ಸೆ.20 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳ ಸೂಕ್ಷ್ಮ/ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಂಗಳೂರು ನಗರದಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಿಟಿ ರೈಲ್ವೆ ನಿಲ್ದಾಣ, ಕೆಂಪೇಗೌಡ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಒಂದು ವೇಳೆ ರಾಜ್ಯಕ್ಕೆ ವಿರುದ್ಧವಾಗಿ ಬಂದಲ್ಲಿ ಪ್ರತಿಭಟನೆ ಭುಗಿಲೇಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಪೊಲೀಸರನ್ನು, 3 ಸಾವಿರ ಸಿ ಆರ್ ಪಿಎಫ್ ಸಿಬ್ಬಂದಿಗಳನ್ನು  ನಿಯೋಜಿಸಲಾಗಿದ್ದು, ಮೈಸೂರು ರಸ್ತೆ, ಹೆಗ್ಗನಹಳ್ಳಿಗಳಲ್ಲಿ ಪೊಲೀಸ್ ಇಲಾಖೆ ವಿಶೇಷ ಭದ್ರತೆ ಒದಗಿಸಿದ್ದು ಈ ಭಾಗಗಳಲ್ಲಿ ಸೆ.25 ವರೆಗೆ ನಿಷೇದಾಜ್ಞೆ ಜಾರಿಯಲ್ಲಿದೆ.

ಒಟ್ಟಾರೆ ಬೆಂಗಳೂರಿನಲ್ಲಿ ಕೆಆರ್ ಪಿಎಫ್ ನ 40 ತುಕಡಿಗಳು,  ಸಿಟಿ ಸಶಸ್ತ್ರ ಮೀಸಲು ಪಡೆಯ 30 ತುಕಡಿಗಳು,  ರಾಪಿಡ್ ಆಕ್ಷನ್ ಫೋರ್ಸ್ ನ 6 ತಂಡ, ಮೂರೂ ಸೀಮಾ ಸುರಕ್ಷಾ ದಳ, 3 ಗಡಿ ಭದ್ರತಾ ಪಡೆ ತುಕಡಿಗಳು ಹಾಗು ಇಂಡೋ ಟಿಬೆಟಿಯನ್ ಗಡಿ ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ನು ಮಂಡ್ಯದ ಸಂಜಯ್ ವೃತ್ತದಲ್ಲಿ ಪೊಲೀಸ್ ಇಲಾಖೆ ಮುಂಜಾಗೃತಾ ಕ್ರಮವಾಗಿ ಈಗಾಗಲೇ ಸೆಕ್ಷನ್ 144 ನ್ನು ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಬರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಮ್ ಬಳಿಯೂ ಅತ್ಯಂತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಳೆದ ವಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಳೆದ ವಾರ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ