ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿ ವಿವಾದ: ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

ಕಾವೇರಿ ನೀರು ಬಿಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಹಾಗೂ ರಾಜ್ಯದ ಜಲಾಶಯಗಳ ಸ್ಥಿತಿಗತಿ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರು: ಕಾವೇರಿ ನೀರು ಬಿಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಹಾಗೂ ರಾಜ್ಯದ ಜಲಾಶಯಗಳ ಸ್ಥಿತಿಗತಿ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಗುರುವಾರ  ದೆಹಲಿಗೆ ತೆರಳಲಿದ್ದಾರೆ.

ಪ್ರತಿ ನಿತ್ಯ ತಮಿಳುನಾಡಿಗ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪಾಲಿಸಿದರೆ ಕರ್ನಾಟಕದ ಕುಡಿಯುವ ನೀರಿಗೂ ತೊಂದರೆಯಾಗಲಿದೆ  ಎಂಬ ಅಂಶವನ್ನು ಹಿರಿಯ ಮುಖಂಡರಿಗೆ ಹಾಗೂ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ವರಿಷ್ಠರು  ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದಿಂದ ಉಂಟಾಗಿರುವ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ವಿವರಿಸಲಿದ್ದಾರೆ.

ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ವಿಶೇಷ ಅಧಿವೇಶನ ಕರೆದಿರುವ ಕುರಿತು ಅವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.  ಅದಾದ ಬಳಿಕ ಹಿರಿಯ ಕಾಂಗ್ರೆಸ್‌ ಮುಖಂಡ ಎಸ್‌.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಸರ್ಕಾರದ ಮುಂದಿರುವ ಸವಾಲುಗಳ ಬಗ್ಗೆ ಚರ್ಚಿಸಿ ಅವರಿಂದ ಸಲಹೆ ಪಡೆಯಲಿದ್ದಾರೆ. ಮಧ್ಯಾಹ್ನ 12ಕ್ಕೆ  ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿ, ಬಳಿಕ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನ ಕರೆಯುವ ಮೂಲಕ ಸಮಯ ಪಡೆದುಕೊಂಡ ಸರ್ಕಾರ
ತಮಿಳುನಾಡಿಗೆ ಸೆಪ್ಟೆಂಬರ್ 21ರಿಂದ 27ರವರೆಗೆ ನಿತ್ಯ 6 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೆ ಕೃಷ್ಣರಾಜ ಸಾಗರದಿಂದ (ಕೆಆರ್‌ಎಸ್‌) ಬಿಡುಗಡೆ  ಮಾಡಿದ ನೀರು ಕರ್ನಾಟಕ-ತಮಿಳುನಾಡು ಗಡಿಯ ಬಿಳಿಗುಂಡ್ಲುವಿನಲ್ಲಿರುವ ಕೇಂದ್ರ ಮಾಪನದಲ್ಲಿ ದಾಖಲಾಗಲು ಕನಿಷ್ಠ 48 ಗಂಟೆ ಬೇಕು. ಅಂದರೆ 21ರಂದು ನೀರು ಬಿಟ್ಟರೆ ಅದು ಹೋಗಿ  ತಲುಪಲು ಸೆಪ್ಟೆಂಬರ್ 23 ಆಗುತ್ತದೆ. ಅಂದೇ ವಿಶೇಷ ಅಧಿವೇಶನ ಇರುವುದರಿಂದ ಅಲ್ಲಿಯವರೆಗೂ ಸಮಯ ಸಿಗುತ್ತದೆ ಎಂಬುದು ನೀರು ಬಿಡುಗಡೆ ಮುಂದೂಡಿಕೆ ತೀರ್ಮಾನಕ್ಕೆ ಕಾರಣ  ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!