ಮಾದೇಗೌಡ ನೇತೃತ್ವದಲ್ಲಿ ಪ್ರತಿಭಟನೆ 
ರಾಜ್ಯ

ಮಂಡ್ಯದಲ್ಲಿ ಮಾದೇಗೌಡ ನೇತೃತ್ವದಲ್ಲಿ ನಡೆಯುತ್ತಿದ್ದ ಕಾವೇರಿ ಹೋರಾಟ ಸ್ಥಗಿತ

ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿದ್ದ ಚಳುವಳಿಯನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಾವೇರಿ...

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿದ್ದ ಚಳುವಳಿಯನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರ ಹೇಳಿದ್ದಾರೆ.
ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾದೇಗೌಡ ಅವರ ನೇತೃತ್ವದಲ್ಲಿ ಕಳೆದ 18 ದಿನಗಳಿಂದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಮತ್ತು ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಮತ್ತು ಕಾವೇರಿ ಕೊಳ್ಳದ ರೈತರಿಗೆ ಪರಿಹಾರ ನೀಡುವುದಾಗಿ ಹಾಗೂ ಪ್ರತಿಭಟನೆ ವೇಳೆ ಬಂಧನಕ್ಕೊಳಗಾಗಿದ್ದ ರೈತರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಇಂದು ಚಳವಳಿಯನ್ನು ಸ್ಥಗಿಗೊಳಿಸಲಾಗಿದೆ ಎಂದು ಮಾದೇಗೌಡರು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು, ಕಲಾವಿದರು, ಸಾಹಿತಿಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು.
ಮಾದೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ ಗುರುವಾರ ಸರ್ಕಾರಿ ಕಚೇರಿಗಳಿಗೆ ತೆರಳಿ ಬಾಗಿಲು ಮುಚ್ಚಿಸುವ ಮೂಲಕ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!